Thursday, November 19, 2026

ಪ್ರಾಯೋಗಿಕ ಆವೃತ್ತಿ

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸದ್ದು ಮಾಡಿದ ದೇವರು, ಅಜ್ಜ, ಅಲ್ಲಾ, ಬುದ್ದ, ಬಸವ, ಅಂಬೇಡ್ಕರ್, ಸಂವಿಧಾನ !

ಕರ್ನಾಟದಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಸೇರಿದಂತೆ 8 ಸಂಪುಟ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ಭಾರತದ ಬಹುತ್ವ ಮತ್ತು ವೈವಿಧ್ಯತೆಯನ್ನು ಬಿಂಬಿಸುವಂತಿತ್ತು.

ಸಿಎಂ ಆಗಿ ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರು.

ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಬುದ್ಧ, ಬಸವ,Oath program ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಜಿ ಪರಮೇಶ್ವರ್‌ರವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜಮೀರ್ ಅಹಮದ್ ಖಾನ್ ಅಲ್ಲಾ ಮತ್ತು ಅವರ ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದ ಮಂತ್ರಿಗಳು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಒಟ್ಟಾರೆಯಾಗಿ ಕಾಂಗ್ರೆಸ್ ಸರ್ಕಾರದ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭ ಹಲವು ವೈಶಿಷ್ಠ್ಯಗಳಿಂದ ಗಮನ ಸೆಳೆಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ