Thursday, November 19, 2026

ಪ್ರಾಯೋಗಿಕ ಆವೃತ್ತಿ

ರಾಜ್ಯದ ಜನರಿಗೆ ಧನ್ಯವಾದ ಅರ್ಪಿಸಿದ ಸೋನಿಯಾ ಗಾಂಧಿ

ಕಾಂಗ್ರೆಸ್ ಪಕ್ಷಕ್ಕೆ ಐತಿಹಾಸಿಕ ಬಹುಮತ ನೀಡಿರುವ ಕರ್ನಾಟಕ ರಾಜ್ಯದ ಜನತೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೃದಯಪೂರ್ವಕ ಅಭಿನಂದನೆ ಅರ್ಪಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪದಗ್ರಹಣದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ವಿಡಿಯೋ ಸಂದೇಶ ನೀಡಿದ್ದಾರೆ. ರಾಜ್ಯದ ಜನತೆ ನೀಡಿದ ಈ ಬಹುಮತ ಜನಪರ ಸರ್ಕಾರಕ್ಕಾಗಿ, ಈ ಬಹುಮತ ಬಡವರ ಪರವಾದ ಸರ್ಕಾರಕ್ಕಾಗಿ. ಇದು ವಿಭಜನೆ ರಾಜಕೀಯ ಹಾಗೂ ಭ್ರಷ್ಟಾಚಾರವನ್ನು ತಿರಸ್ಕರಿಸುವ ಜನಾದೇಶವಾಗಿದೆ ಎಂದಿದ್ದಾರೆ.

ಇಂದು ರಚನೆಯಾಗಿರುವ ಕಾಂಗ್ರೆಸ್ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದ್ದು, ಮೊದಲ ಸಚಿವ ಸಂಪುಟದಲ್ಲಿ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹೆಮ್ಮೆಯ ವಿಚಾರ.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಶಾಂತಿ, ಸಾಮರಸ್ಯ ಹಾಗೂ ಪ್ರಗತಿ ಸಾಧಿಸಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ