Friday, November 20, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಸೃಷ್ಟಿ – ಜಿಲ್ಲಾಧಿಕಾರಿ

ಇಂದಿನ ದಿನಗಳ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗುವಂತಹ ವಾತಾವರಣವನ್ನು ಸೃಷ್ಟಿಸಲಾಗಿದೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಉತ್ತಮ ಶಿಕ್ಷಣವಂತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವೃತ್ತಿಪರ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ 2023-24 ನೇ ಸಾಲಿನ ವಿದ್ಯಾರ್ಥಿನಿಲಯದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ, ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಇಲಾಖೆಗಳ ಮೂಲಕ ವಿದ್ಯಾರ್ಥಿನಿಲಯಗಳಲ್ಲಿ ಸೌಲಭ್ಯಗಳನ್ನು ಕಲ್ಪಿಸಿ ಉತ್ತಮ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಟ್ಟಿದೆ ಇದರ ಪ್ರಯೋಜನೆ ಪಡೆದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಸಮಾಜಕ್ಕೆ ಕೊಡುಗೆಗಳನ್ನ ನೀಡಬೇಕಿದೆ ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಹೆಚ್ ಎಲ್ ನಾಗಾರಾಜು ಮಾತನಾಡಿ, ಹೆಣ್ಣು ಮಕ್ಕಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಬೇಕು. ಏಕೆಂದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಹಿಳೆಯರಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಕೆಲಸ ಮಾಡಿದ್ದಾರೆ ಎಂದರು.

ಹೆಣ್ಣು ಮಕ್ಕಳು ಶಾಲೆಯನ್ನೇ ನೋಡದ ದಿನಗಳಿದ್ದೋ ಆದರೆ, ಇವಾಗ ಹೆಣ್ಣು ಮಕ್ಕಳಿಲ್ಲದ ಶಾಲಾ ಕಾಲೇಜು ಹಾಗೂ ಸ್ಥಾನಮಾನಗಳಿಲ್ಲ. ಇಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮೇಲುಗೈ ಸಾಧಿಸುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಓ ಶೇಕ್ ತನ್ವೀರ್ ಆಸಿಫ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ.ಸಿದ್ದಲಿಂಗೇಶ್, ಬಿಇಓ ಸೌಭಾಗ್ಯ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಕಾವ್ಯಶ್ರೀ, ವಾರ್ಡನ್‌ಗಳಾದ ಸುಷ್ಮ, ವಿನೋದ್ ಕುಮಾರ್, ಕೃಷ್ಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ