ಐಪಿಎಲ್ ಬೆಟ್ಟಿಂಗ್ ಸಂಬಂಧ ನಡೆದ ಜಗಳದಲ್ಲಿ ಗುಂಪೊಂದು ಯುವಕನೊಬ್ಬನನ್ನು ಕೊಲೆಗೈದಿರುವ ಘಟನೆ ಮದ್ದೂರು ತಾಲ್ಲೂಕಿನ ಹುಲಿಗೆರೆಪುರದಲ್ಲಿ ಗುರುವಾರ ಸಂಜೆ ಜರುಗಿದೆ.
ಘಟನೆಯಲ್ಲಿ ಗ್ರಾಮದ ಪುನೀತ(30) ಕೊಲೆಯಾದ ಯುವಕ. ಐಪಿಎಲ್ ಬೆಟ್ಟಿಂಗ್ ಹಣ ಪಡೆಯಲು ಹೋಗಿದ್ದ ಪುನೀತ್ ಮೇಲೆ ಮರಣಾಂತಿಕ ಹಲ್ಲೆ ನಡೆಸಲಾಗಿತ್ತು. ತೀವ್ರ ಗಾಯಗೊಂಡ ಪುನೀತ್ ಅವರನ್ನು ಅಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹತ್ಯೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಶೋಧ ಕೈಗೊಂಡಿದ್ದಾರೆ.
ಪ್ರಕರಣ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.