ಕರ್ನಾಟಕ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕ, ನಾಗಮಂಗಲ ಶಾಸಕ ಎನ್. ಚಲುವರಾಯಸ್ವಾಮಿ ಅವರು ಆದಿಚುಂಚನಗಿರಿ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸ್ವಾಮೀಜಿಯವರು ಸಚಿವ ಚಲುವರಾಯಸ್ವಾಮಿ ಅವರನ್ನುದ್ಧೇಶಿಸಿ ಮಾತನಾಡಿ, ‘ನಾಡಿಗೆ ನಿಮ್ಮಿಂದ ಉತ್ತಮ ಅಭಿವೃದ್ಧಿ ಕೆಲಸಗಳಾಗಲಿ, ನಾಗಮಂಗಲ ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ಹೆಚ್ಚು ನಡೆಯಲಿ ಎಂದು ಶುಭ ಹಾರೈಸಿದರು.
ಈ ವೇಳೆ ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ ಅವರು ಜೊತೆಗಿದ್ದರು.




