Tuesday, April 30, 2024

ಪ್ರಾಯೋಗಿಕ ಆವೃತ್ತಿ

ಆರೋಪಿ ಪರ ನಿಂತಿರುವ ಮೋದಿ ಸರ್ಕಾರದ ವಿರುದ್ಧ ಆಕ್ರೋಶ ; ಬ್ರಿಜ್ ಭೂಷಣ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಶನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ನನ್ನು ಬಂಧಿಸದ ಕೇಂದ್ರದ ನರೇಂದ್ರ ಮೋದಿ ಸರ್ಕಾರ, ಪ್ರಖ್ಯಾತ ಮಹಿಳಾ ಕುಸ್ತಿ ಪಟುಗಳ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿ, ಕಿರುಕುಳ ನೀಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿ ಹಲವು ಸಂಘಟನೆಗಳು ಮಳವಳ್ಳಿ ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದವು.

ಸಂಯುಕ್ತ ಕಿಸಾನ್ ಮೋರ್ಚಾ ಕರೆಯ ಮೇರೆಗೆ ಮಳವಳ್ಳಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ, ಸಿಐಟಿಯು, ಜನವಾದಿ ಮಹಿಳಾ ಸಂಘಟನೆ, ದಲಿತ ಸಂಘಟನೆಗಳು ಸೇರಿ ದೆಹಲಿಯಲ್ಲಿ ನಡೆಯುತ್ತಿರುವ ಮಹಿಳಾ ಕ್ರೀಡಾ ಪಟುಗಳ ಹೋರಾಟ ಬೆಂಬಲಿಸಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಹೋರಾಟ ನಡೆಸಿದವು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಎನ್ ಎಲ್ ಭರತ್ ರಾಜ್ ಮಾತನಾಡಿ, ಮೋದಿ ಸರ್ಕಾರ ಮಹಿಳಾ ಕ್ರೀಡಾಪಟುಗಳನ್ನು ಹಿಂಸಿಸುತ್ತಿರುವುದು ಅತ್ಯಂತ ಅಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ. ಈ ಸಂದರ್ಭಗಳಲ್ಲಿ ಮೋದಿ ಸರ್ಕಾರ ಆರೋಪಿಪರ ನಿಂತಿರುವುದು ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದರು.

nudikarnataka.com

” ಭೇಟಿ ಬಚಾವೋ , ಭೇಟಿ ಪಡಾವೋ” ಎಂದು ಪ್ರಚಾರ ಮಾಡುವ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ,ಹೀನ ಅಪರಾಧದ ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ಮಾನವ ಕುಲದ ದುರಂತ ಸಂಗತಿಯಾಗಿದೆ. ದೂರಿನ ಆಧಾರದಲ್ಲಿ ಕಾನೂನು ಕ್ರಮ ಜರುಗಿಸಿ ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸಬೇಕಾಗಿದ್ದ ಬಿಜೆಪಿ ನೇತೃತ್ವದ ಸರ್ಕಾರ ತನ್ನ ಪೊಲೀಸ್ ಪಡೆಗಳನ್ನು ಬಳಸಿ ,ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ. ಪೊಲೀಸರು ಕುಡಿದು ಬಂದು ಪ್ರತಿಭಟನಾ ಕಾರರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಇಷ್ಟೆಲ್ಲಾ ಕಿರುಕುಳಗಳ ಮಧ್ಯೆಯೂ ನ್ಯಾಯ ಸಿಗುವ ತನಕ ಹೋರಾಟ ನಿಲ್ಲಿಸುವುದಿಲ್ಲ ಎಂದು ಪ್ರತಿಭಟಿಸುತ್ತಿರುವುದು ಅತ್ಯಂತ ಪ್ರಶಂಸನೀಯ ಹಾಗೂ ಅಭಿನಂದನಾರ್ಹವಾಗಿದೆ ಎಂದರು.

ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕೊನೆಗಾಣಬೇಕು, ಇದಕ್ಕಾಗಿ ದೇಶದ ಎಲ್ಲಾ ನಾಗರಿಕರು ಈ ಪ್ರತಿಭಟನೆಯನ್ನು ಬೆಂಬಲಿಸಬೇಕು . ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರ ಮೇಲೆ ಇಷ್ಟು ಕಿರುಕುಳ ಆದರೆ ಇನ್ನು ಸಾಮಾನ್ಯ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ಕೇಳುವುದು ಹೇಗೆ ಎಂಬ ಪ್ರಶ್ನೆ ಯನ್ನು ನಾವೆಲ್ಲರೂ ಹಾಕಿಕೊಳ್ಳಬೇಕಾಗುತ್ತದೆ. ದೇಶದ ಕೀರ್ತಿ ಪತಾಕೆಯನ್ನು ಹಾರಿಸಿ ಹೆಮ್ಮೆಯ ಪದಕಗಳನ್ನು ದೇಶಕ್ಕಾಗಿ ಗೆದ್ದವರು ಲೈಂಗಿಕ ಕಿರುಕುಳ ಕ್ಕೆ ಒಳಗಾಗಿರುವುದು ಅತ್ಯಂತ ನಾಚೀಕೇಗೇಡಿನ ಸಂಗತಿಯಾಗಿದೆ. ನ್ಯಾಯಕ್ಕಾಗಿ ಆಗ್ರಹಿಸುತ್ತಿರುವ ನೊಂದ ಕ್ರೀಡಾಪಟುಗಳ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಬೇಜಾವಾಬ್ದರಿ ಹಾಗೂ ಕ್ರಿಮಿನಲ್ ದೌರ್ಜನ್ಯ ದಿಂದ ಮತ್ತಷ್ಟು ನೊಂದು ಕಣ್ಣೀರು ಹಾಕುತ್ತಿದ್ದಾರೆ. ಪ್ರಪಂಚದಲ್ಲಿ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಕರೆದುಕೊಳ್ಳುವ ನಮ್ಮ ದೇಶಕ್ಕೆ ಇದು ಶೋಭೆ ತರುವುದಿಲ್ಲ ಎಂದರು.

ದೇಶಕ್ಕೆ ಕೀರ್ತಿ ತರುವ ಸಾಮರ್ಥ್ಯ ದ ಕ್ರೀಡಾಪಟುಗಳ ಆತ್ಮ ಸ್ಥೈರ್ಯ ಕುಂದಿಸುವ ಕೆಲಸವನ್ನು ಈ ಕೂಡಲೇ ಬಿಜೆಪಿ ಸರ್ಕಾರ ನಿಲ್ಲಿಸಬೇಕು . ಈ ಕೂಡಲೇ ಪೋಸ್ಕೋ ಸೇರಿದಂತೆ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ನಡೆಸಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದೇಶದಾದ್ಯಂತ ಪ್ರತಿಭಟನೆ ನಡೆಸಿ ಆಗ್ರಹಿಸಲಾಗುತ್ತಿದೆ. ಎಂದರು

ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ಜಿ ರಾಮಕೃಷ್ಣ, ತಿಮ್ಮೇಗೌಡ, ಜನವಾದಿ ಮಹಿಳಾ ಸಂಘಟನೆಯ ಸುಶೀಲಾ, ಸುನಂದಮ್ಮ, ರತ್ನಮ್ಮ, ಪ್ರಾಂತ ರೈತ ಸಂಘದ ಶಿವಕುಮಾರ್, ಗುರುಸ್ವಾಮಿ, ಮಹಾದೇವು, ಚಿಕ್ಕಸ್ವಾಮಿ, ಮರಿಲಿಂಗೇಗೌಡ, ಮೂರ್ತಿ, ಚಿಕ್ಕಣ್ಣ, ತಗಡೇಗೌಡ, ಸತೀಶ್, ಕೆಂಚೇಗೌಡ, ಪ್ರದೀಪ್, ದಲಿತ ಸಂಘಟನೆಯ ಸಿದ್ದರಾಜ್, ಯತೀಶ್ ಹಾಗೂ ಮಹೇಶ್ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!