Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ಹೊನಗನಹಳ್ಳಿಯಲ್ಲಿ ಅಂಬೇಡ್ಕರ್ ಪ್ರತಿಮೆ ಲೋಕಾರ್ಪಣೆ

ಮಳವಳ್ಳಿ ತಾಲೂಕಿನ ಕಿರುಗಾವಲು ಹೋಬಳಿಯ ಹೊನಗನಹಳ್ಳಿ ಗ್ರಾಮದಲ್ಲಿ ಜೂ.4ರಂದು ಮಧ್ಯಾಹ್ನ 12.30 ಗಂಟೆಗೆ ಡಾ. ಬಿ.ಆರ್.ಅಂಬೇಡ್ಕರ್ ಸಂಘದ ವತಿಯಿಂದ ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.

ಚಾಮರಾಜನಗರ ನಳಂದ ವಿಶ್ವವಿದ್ಯಾನಿಲಯದ ಬೋಧಿ ದತ್ತ ಥೇರಾ ಬಂತೇಜಿ ಹಾಗೂ ಬೆಂಗಳೂರಿನ ಬಂತೇ ಮತಾ ಮೈತ್ರೇಯ ದಿವ್ಯ ಸಾನಿಧ್ಯ ವಹಿಸುವರು. ಮೈಸೂರು ಉರಿಲಿಂಗಿ ಪೆದ್ದಿಮಠದ ಪೀಠಾಧ್ಯಕ್ಷ ಜ್ಞಾನ ಪ್ರಕಾಶ್ ಸ್ವಾಮೀಜಿ ಸಮಾರಂಭದ ಉದ್ಘಾಟನೆ ಮಾಡುವರು.
ಶಾಸಕ ಪಿಎಂ ನರೇಂದ್ರಸ್ವಾಮಿ ಅಧ್ಯಕ್ಷತೆ ವಹಿಸುವರು. ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿಮೆ ಅನಾವರಣ ಮಾಡುವರು.

ಮುಖ್ಯ ಅತಿಥಿಗಳಾಗಿ ರಾಜ್ಯ ಎಸ್ಸಿ, ಎಸ್ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ ಚಂದ್ರಶೇಖರಯ್ಯ, ಬೆಳಕವಾಡಿ ತಾ.ಪಂ. ಮಾಜಿ ಅಧ್ಯಕ್ಷ ಬಿ ಮಹದೇವಸ್ವಾಮಿ, ಮೈಸೂರು ಎಪಿಎಂಸಿ ಮಾಜಿ ಉಪಾಧ್ಯಕ್ಷ ಅಹಿಂದ ಚಿಕ್ಕ ಜವರಪ್ಪ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಡಿ ಹರೀಶ್ ಬಾಬು, ಡಾ.ಅಂಬೇಡ್ಕರ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಸಿ ನಂಜುಂಡಸ್ವಾಮಿ, ಕಾರ್ಯಪಾಲಕ ಇಂಜಿನಿಯರ್ ಕೆಎಂ ರವಿಕುಮಾರ್, ಲೋಕೋಪಯೋಗಿ ಇಲಾಖೆಯ ಎಚ್.ಪಿ ಮಹದೇವ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್ ಪಿ.ನಂಜುಂಡಯ್ಯ, ಇನ್ಸೂರೆನ್ಸ್ ಕಂಪನಿಯ ಎನ್ ಸೋಮಣ್ಣ, ಪೊಲೀಸ್ ಇಲಾಖೆ ಬಸವಯ್ಯ, ಪ್ರವೀಣ್ ಕುಮಾರ್, ಸರ್ಕಾರಿ ನೌಕರರಾದ ರಾಜು ಆರ್, ಶಿವನಂಜಯ್ಯ ಮತ್ತಿತರರು ಪಾಲ್ಗೊಳ್ಳುವರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ