ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಾಲೆಗೆ ಉರುಳಿ ಬಿದ್ದು ನಾಲ್ವರಿಗೆ ತೀವ್ರ ಗಾಯಗಳಾಗಿರುವ ಘಟನೆ ಮಾಚಹಳ್ಳಿ (ಶಿವಳ್ಳಿ) ಗ್ರಾಮದಲ್ಲಿ ಜರುಗಿದೆ.
ಭಾನುವಾರ ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಘಟನೆ ಜರುಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುಮಾರು 50 ಅಡಿ ಅಳದ ವಿಸಿ ನಾಲೆಗೆ ಕಾರು ಉರುಳಿದ ಹಿನ್ನಲೆಯಲ್ಲಿ ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಘಟನೆ ಕುರಿತು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.




