ರಾಜ್ಯ ಸರ್ಕಾರದ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಜೂನ್ 9 ರಂದು ಮಂಡ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಮಧ್ಯಾಹ್ನ 12 ಗಂಟೆಗೆ ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಆಗಮಿಸಿ ಮಳವಳ್ಳಿಯ ಶಾಸಕರ ಮನೆಗೆ ಭೇಟಿ ಮಾಡಿ, ನಂತರ ಕೃಷಿ ಮತ್ತು ಇತರೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಮಧ್ಯಾಹ್ನ 2 ಮದ್ದೂರು ಪ್ರವಾಸಿ ಮಂದಿರಕ್ಕೆ ಭೇಟಿ ನೀಡುವರು, ಮಧ್ಯಾಹ್ನ 2.30 ಗಂಟೆಗೆ ರಸ್ತೆಯ ಮೂಲಕ ಚನ್ನಪಟ್ಟಣ, ರಾಮನಗರ, ಬಿಡದಿ ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ತೆರಳುವರು ಎಂದು ಕೃಷಿ ಸಚಿವರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




