Thursday, November 19, 2026

ಪ್ರಾಯೋಗಿಕ ಆವೃತ್ತಿ

ಉಚಿತ ಬಸ್ ಪ್ರಯಾಣ ‘ಶಕ್ತಿ’ ಯೋಜನೆಗೆ ಮಂಡ್ಯದಲ್ಲೂ ಚಾಲನೆ

ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ ‘ಶಕ್ತಿ’ ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜೂ.11ರಂದು ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧರಿಸಿದ್ದು, ಅದೇ ದಿನ ಮಂಡ್ಯ ಜಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಈ ಯೋಜನೆ ಚಾಲನೆ ನೀಡಲಿದ್ದಾರೆ.

ಅದರಂತೆ ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ.

“ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು. ಸರ್ಕಾರ ತನ್ನ ಮೇಲೆ ಬೀಳುವ ಆರ್ಥಿಕ ಹೊರೆಯ ಹೊರತಾಗಿಯೂ ಜನ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಅಸ್ತಿತ್ವಕ್ಕೆ ಬಂದ ತಿಂಗಳ ಒಳಗೇ ಜಾರಿಗೆ ತರುತ್ತಿದೆ. ಯಾವುದೇ ಜಾತಿ, ಧರ್ಮದ ಮಿತಿಗೆ ಒಳಪಡದ ಶಕ್ತಿ ಯೋಜನೆಯ ಅನುಕೂಲ ಅರ್ಹರಿಗೆಲ್ಲಾ ತಲುಪುವಂತೆ ನೋಡಿಕೊಳ್ಳಬೇಕು” ಎಂದು ಸಚಿವರು ಮತ್ತು ಶಾಸಕರುಗಳಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ.

“ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗಿದ್ದು, ತಕ್ಷಣ ಎಲ್ಲ ಸಚಿವರೂ ಕಾರ್ಯೋನ್ಮುಖರಾಗಿ ಯೋಜನೆಯ ಅರ್ಥಪೂರ್ಣ ಚಾಲನೆ ನೀಡಬೇಕು. ಬೆಂಗಳೂರಿನಲ್ಲಿ ನಾನು ಯೋಜನೆಗೆ ಚಾಲನೆ ನೀಡುತ್ತೇನೆ. ಅದೇ ಹೊತ್ತಲ್ಲಿ ಶಾಸಕರು ಮತ್ತು ಜಿಲ್ಲಾ ಸಚಿವರುಗಳು ತಮ್ಮ ತಮ್ಮ ಜಿಲ್ಲೆ ಮತ್ತು ಕ್ಷೇತ್ರಗಳಲ್ಲಿ ಯೋಜನೆಗೆ ಚಾಲನೆ ನೀಡಬೇಕು” ಎಂದು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ