Friday, November 20, 2026

ಪ್ರಾಯೋಗಿಕ ಆವೃತ್ತಿ

ವರುಣನ ಕೃಪೆಗಾಗಿ ಕನ್ನಂಬಾಡಿಯಲ್ಲಿ ಪ್ರರ್ಜನ್ಯ ಹೋಮ

ಕನ್ನಂಬಾಡಿ ಅಣೆಕಟ್ಟೆ ಬರಿದಾಗಿರುವ ಹಿನ್ನೆಲೆಯಲ್ಲಿ ವರುಣನ ಕೃಪೆಗಾಗಿ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ನಲ್ಲಿ ಮಂಗಳವಾರ ಪ್ರರ್ಜನ್ಯ ಹೋಮ ನೆರವೇರಿಸಲಾಗಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಠಿಯಿಂದ ನಿರ್ಮಾಣವಾಗಿರುವ ಕನ್ನಂಬಾಡಿ ಅಣೆಕಟ್ಟೆ ಮಂಡ್ಯ, ಮೈಸೂರು ಹಾಗೂ ತಮಿಳುನಾಡಿನ ಲಕ್ಷಾಂತರ ರೈತರ ಕೃಷಿಗೆ ಆಸರೆಯಾಗಿದ್ದು, ಸಾಂಸ್ಕೃತಿಕ ರಾಜಧಾನಿ ಮೈಸೂರು ಹಾಗೂ ರಾಜ್ಯ ರಾಜಧಾನಿ ಬೆಂಗಳೂರಿನ ಕೋಟ್ಯಾಂತರ ಜನರಿಗೆ ಕುಡಿಯುವ ನೀರು ಪೂರೈಸುವ ಅಣೆಕಟ್ಟೆಯಾಗಿದೆ.

ಪ್ರಸ್ತುತ ನೀರು ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಡಾ.ಭಾನುಪ್ರಕಾಶ್ ಶರ್ಮ ಹಾಗೂ ಸ್ಥಳೀಯ ಶಾಸಕ ಎ.ಬಿ.ರಮೇಶ್ ಬಾಬು ಬಂಡಿಸಿದ್ದೇಗೌಡ ನೇತೃತ್ವದಲ್ಲಿ ಇಂದು ಮುಂಜಾನೆ ಅಣೆಕಟ್ಟೆಗೆ ಹೊಂದಿಕೊಂಡಿರುವ ಕಾವೇರಿ ಮಾತೆಯ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಳೆಗಾಗಿ ಪ್ರಾರ್ಥಿಸಲಾಯಿತು.

ಡಾ.ಭಾನುಪ್ರಕಾಶ್ ಶರ್ಮ ನೇತೃತ್ವದ 12 ವೈದಿಕರ ತಂಡದಿಂದ ಪ್ರರ್ಜನ್ಯ ಜಪ ಹೋಮ, ಕಳಶ ಸ್ಥಾಪನೆ, ಮಹಾಗಣಪತಿ ಪೂಜೆ, ಪುಣ್ಯಾಧಿ, ಆದಿತ್ಯ ಪೂಜೆ, ರುದ್ರಾಭಿಷೇಕ ಹಾಗೂ ಮಳೆ ದೇವತೆಗಳ ಆಹ್ವಾಹನೆ ನೆರವೇರಿಸಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ