Saturday, November 21, 2026

ಪ್ರಾಯೋಗಿಕ ಆವೃತ್ತಿ

ಸಚಿವ ಭೈರತಿ ಸುರೇಶ್ ಹುಟ್ಟುಹಬ್ಬ ; ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ

ಮಂಡ್ಯ ತಾಲೂಕಿನ ಕೆರೋಗೊಡು ಹೋಬಳಿಯ ದ್ಯಾಪಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಭೈರತಿ ಸುರೇಶ್ ಅಭಿಮಾನಿಗಳ ಬಳಗ ವತಿಯಿಂದ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಜನ್ಮದಿನ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಯಿತು.

ಮಂಡ್ಯ ಜಿಲ್ಲಾ ಕುರುಬರ ಸಂಘದ ನಿರ್ದೇಶಕ ಸಾತನೂರು ಎನ್. ಮಹೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿಯಾದರೂ ಸರ್ಕಾರಿ ಶಾಲೆಗಳ ಮುಚ್ಚುವ ಸ್ಥಿತಿ ಎದುರಾಗದಂತೆ ಸರ್ಕಾರ ಹೆಚ್ಚು ಗಮನ ನೀಡಬೇಕಿದೆ. ರಾಜ್ಯದಲ್ಲಿ ಸಾಮಾಜಿಕ ನ್ಯಾಯ ಪರ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ಹಾದಿಯಲ್ಲಿ ನಡೆದು 2ನೇ ಸಿದ್ದರಾಮಯ್ಯ ಎಂದೇ ಖ್ಯಾತಿ ಗಳಿಸಿರುವ ಸಚಿವ ಭೈರತಿ ಸುರೇಶ್ ಅವರ ಜನ್ಮದಿನವನ್ನು ಸರಳವಾಗಿ ಅರ್ಥಪೂರ್ಣವಾಗಿ ಆಚರಿಸುತ್ತಿದ್ದದೇವೆ ಎಂದರು.

ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಬುಕ್ ಗಳನ್ನು ವಿತರಿಸಿ, ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆ ತರುವಂತೆ ಸಂಕಲ್ಪ ಮಾಡಿ, ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿ ಎದುರಾಗದಂತೆ ನಾವು ನೋಡಿಕೊಳ್ಳುತ್ಥೇವೆ ಎಂಬ ಪ್ರತಿಜ್ಞೆ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷ ನಿಂಗರಾಜು, ಕಾಂಗ್ರೆಸ್ ಮುಖಂಡ ಬಿ ಟಿ ನಾಗರಾಜು, ಉಮೇಶ್, ಮಂಜು ಬಂಡೂರು, ನಾಗಯ್ಯ ಸೇರಿದಂತೆ ಶಿಕ್ಷಕರು ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ