ರಾಜ್ಯದಲ್ಲಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಸದನದಲ್ಲಿ ಮಂಡಿಸಿ, ಜಾರಿಗೆ ತರಬೇಕು ಹಾಗೂ ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿ ಕದಂಬ ಸೇನೆಯು ವಿಜಯಪುರ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ರಾಜ್ಯ ಸರ್ಕಾರ ಲಾಂಛನದಲ್ಲಿ ಹಿಂದಿ ಭಾಷೆಯನ್ನು ಕೈಬಿಟ್ಟು, ಕನ್ನಡ ದಲ್ಲಿ ಸಿರಿಗನ್ನಡಂ ಗೆಲ್ಗೆ ಎಂದು ಉಲ್ಲೇಖಿಸಬೇಕು. ಕೆಎಂಎಫ್ ನಂದಿನಿ ಜೊತೆ ಅಮೂಲ್ ಒಪ್ಪಂದ ತಿರಸ್ಕರಿಸಬೇಕು, ಬನವಾಸಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 250 ಕೋಟಿ ಬಿಡುಗಡೆ ಮಾಡಬೇಕು, ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ, ಚಾಲುಕ್ಯರ ರಾಜಧಾನಿ ಬಾದಾಮಿಯಲ್ಲಿ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಮಾಡಬೇಕೆಂದು ಸೇನೆಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸೇನೆಯ ರಾಜ್ಯ ಕಾರ್ಯದರ್ಶಿ ಎನ್ ಸಿ ಕಾಂಬಳೆ, ವಿಜಯಪುರ ಜಿಲ್ಲಾಧ್ಯಕ್ಷ ವಿನಾಯಕ ಸಂಡೂರ, ಕಾರ್ಯದರ್ಶಿ ಭಾಸ್ಕರ , ಈರಣ್ಣ ಬಂಡಿ, ಮಂಡ್ಯ ಜಿಲ್ಲಾ ಉಪಾಧ್ಯಕ್ಷ ರಾಮು ಮತ್ತಿತರರಿದ್ದರು.




