Saturday, November 21, 2026

ಪ್ರಾಯೋಗಿಕ ಆವೃತ್ತಿ

ಮನೆ ಯಜಮಾನಿಗೆ ₹ 2,000 ನೀಡುವ ”ಗೃಹಲಕ್ಷ್ಮಿ ಯೋಜನೆ”ಗೆ ನಾಳೆಯಿಂದ ಅರ್ಜಿ ಹಾಕಬಹುದು ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮನೆಯ ಯಜಮಾನಿಗೆ ₹2,000 ನೀಡುವ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗೃಹಲಕ್ಷ್ಮಿ’ ಗೆ ನಾಳೆಯಿಂದ (ಜೂ.16) ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೂ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಅರ್ಜಿ ಸಲ್ಲಿಸಬಹುದು” ಎಂದರು.

nudikarnataka.com

“ಕೆಲವು ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಸುವುದು ಸ್ವಲ್ಪ ವಿಳಂಬವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು. 1902 ಹೆಲ್ಪ್ ಲೈನ್ ಮೂಲಕ ಏನಾದರೂ ಗೊಂದಲಗಳಿದ್ದರೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು” ಎಂದು ವಿವರಿಸಿದರು.

ಜಾಹೀರಾತು

“ಶುಕ್ರವಾರ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಶಕ್ತಿಭವನದಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಚಾಲನೆ ಚಾಲನೆ ನೀಡಲಿದ್ದಾರೆ. ನಮ್ಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದ್ದು, ಇದರ ಉಸ್ತುವಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಯುತ್ತದೆ” ಎಂದರು.

ತೆರಿಗೆ ಪಾವತಿಸುವವರಿಗಿಲ್ಲ ಅವಕಾಶ 

“ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ರಿಜೆಕ್ಟ್ ಆಗಲಿದೆ. ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ. ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ಸ್ವೀಕಾರ ಆಗುವುದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ” ಎಂದು ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ.

ಗಮನಿಸಬೇಕಾದ ಪ್ರಮುಖ ಅಂಶಗಳು

  • ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ.
  • (https://sevasindhugs.karnataka.gov.in/gruhalakshmi)
    ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
  • ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
  • ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತಃ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
  • ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.
  • ಮಂಜೂರಾತಿಯ ನಂತರ ನೇರ ನಗದು ವರ್ಗಾವಣೆ ಮಾಡಲಾಗುವುದು. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ.
  • ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ – 1902 ಗೆ ಸಂಪರ್ಕಿಸಬಹುದಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ