Thursday, November 19, 2026

ಪ್ರಾಯೋಗಿಕ ಆವೃತ್ತಿ

ಭಾರತೀನಗರ | ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶೌಚಾಲಯದ ನೀರಿನ ಟ್ಯಾಂಕ್ ಕುಸಿತ

ಭಾರತೀನಗರ ಸಮೀಪದ ಹನುಮಂತನಗರದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯದ ನೀರಿನ ಟ್ಯಾಂಕ್ ಕುಸಿದು ಬಿದ್ದಿದೆ.

ಮಕ್ಕಳು ಶೌಚಾಲಯಕ್ಕೆ ಬಳಕೆ ಮಾಡಲಾಗುತ್ತಿದ್ದ ನೀರಿನ ಟ್ಯಾಂಕ್ ಶಿಥಿಲಗೊಂಡು ಕುಸಿದಿದೆ. ಅದೃಷ್ಟವಶಾತ್ ಇದು ರಾತ್ರಿ ವೇಳೆಯಲ್ಲಿ ಬಿದ್ದಿರುವುದರಿಂದ ಯಾವುದೇ ರೀತಿಯ ಅನಾಹುತ ಸಂಭವಿಸಿಲ್ಲ. ಈ ಶಾಲೆಯಲ್ಲಿ ಕಾಂಪೌಂಡ್ ಸಹ ಕುಸಿದು ಬಿದ್ದಿದೆ.

ಶಿಕ್ಷಣ ಇಲಾಖೆ ಇದನ್ನು ಗಮನ ಹರಿಸಿ ಮಕ್ಕಳ ಶೌಚಾಲಯಕ್ಕೆ ಕೂಡಲೇ ನೀರಿನ ಟ್ಯಾಂಕ್ ಅನ್ನು ನಿರ್ಮಿಸಿಕೊಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಶಾಸಕ ಕದಲೂರು ಉದಯ್ ಅವರು ಶಿಕ್ಷಣ ಇಲಾಖೆಗೆ ತಾಕೀತು ಮಾಡಬೇಕು ಅಥವಾ ತಮ್ಮ ವೈಯುಕ್ತಿಕ ಹಣದಿಂದ ಮಕ್ಕಳ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ