Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸುವುದು ಶೋಭೆಯಲ್ಲ- ಅಶ್ವಥ್‌ ನಾರಾಯಣ್

ಕೇಂದ್ರದ ಅಕ್ಕಿಗಾಗಿ ಆಗ್ರಹಿಸಿ ಕಾಂಗ್ರೆಸಿಗರು ಜೂ.20ರಂದು ಪ್ರತಿಭಟನೆಗೆ ಕರೆ ನೀಡಿರುವುದು ಹಾಸ್ಯಾಸ್ಪದ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವಥ್‌ ನಾರಾಯಣ್ ಹೇಳಿದರು.

ಮಂಡ್ಯ ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿನ ಬೇಕ್‌ ಪಾಯಿಂಟ್ ಬಳಿ ಬಿಜೆಪಿ ಕಾರ್ಯಕರ್ತರು ಆಯೋಜಿಸಿದ್ದ ಜನ್ಮದಿನ ಆಚರಣೆ ಮತ್ತು ಸಿಹಿ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅಲ್ಲ, ಇದೊಂದು ದೋಕಾ ಸರ್ಕಾರ, ಜನತೆಗೆ 5 ಗ್ಯಾರಂಟಿ ನೀಡುತ್ತೇವೆ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದಂತಹ ಇವರು, ಇವತ್ತು ವಿದ್ಯುತ್ ಬಿಲ್ ಹೆಚ್ಚಿಸಿದ್ದಾರೆ ಎಂದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಎಚ್.ಆರ್.ಅರವಿಂದ್, ಗ್ರಾ.ಪಂ.ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ, ವಿವೇಕ್, ಅರುಣ್, ಚಂದ್ರ, ಶಿವಕುಮಾರ್, ಸಿ.ಟಿ.ಮಂಜುನಾಥ್, ವಸಂತ್, ಪ್ರಸನ್ನ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ