Wednesday, November 18, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿಯಲ್ಲಿ ಕೆಲಸಕ್ಕೆ ಬಾರದವರೇ ಹೆಚ್ಚು ಮಾತಾಡುತ್ತಿದ್ದಾರೆ ; ಕಾಂಗ್ರೆಸ್ ವ್ಯಂಗ್ಯ

ಕರ್ನಾಟಕದಲ್ಲಿ ಚುನಾವಣೆ ನಡೆದು ಹೊಸ ಸರ್ಕಾರ ರಚನೆಯಾಗಿ ಸುಮಾರು ಒಂದು ತಿಂಗಳಾಗಿದರೂ ಈ ವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ರಾಜ್ಯ ಬಿಜೆಪಿ ಬಗ್ಗೆ ಕಾಂಗ್ರೆಸ್ ಕುಹಕವಾಡಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಕಾಂಗ್ರೆಸ್, ”ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು, ಮನೆಯಲ್ಲಿ ಕುಂತವರು, ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಒಬ್ಬನೇ ಒಬ್ಬ ವ್ಯಕ್ತಿ ವಿರೋಧ ಪಕ್ಷದ ನಾಯಕ ಸಿಗಲಿಲ್ಲವೇ ಬಿಜೆಪಿಯಲ್ಲಿ? ನಾಯಕರೇ ಇಲ್ಲದ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ!” ಎಂದು ಪ್ರಶ್ನಿಸಿದೆ.

“>

ಈ ಹಿಂದೆಯೂ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನೇಮಕ ಮಾಡದ ವಿಚಾರವಾಗಿ ಕಾಂಗ್ರೆಸ್ ಪಕ್ಷ ಬಿಜೆಪಿಯ ಕಾಲೆಳೆದಿತ್ತು. ”ನಾವು ಗೆದ್ದೂ ಆಯ್ತು,ಸಿಎಂ, ಡಿಸಿಎಂ ಆಯ್ಕೆಯೂ ಆಯ್ತು,ಸಚಿವ ಸಂಪುಟವೂ ರೆಡಿ ಆಯ್ತು,ಸರ್ಕಾರದ ರಚನೆಯೂ ಆಯ್ತು,ಇದುವರೆಗೂ ನಮ್ಮ ಸರ್ಕಾರವನ್ನು ಎದುರಿಸಲು ಬಿಜೆಪಿ ಗೆ ಸಮರ್ಥ ವಿರೋಧ ಪಕ್ಷದ ನಾಯಕ ಸಿಗದಿರುವುದು ದುರಂತ!ನೈತಿಕತೆ ಇರದಿದ್ದರೇನಂತೆ,ಕನಿಷ್ಠ ವಿರೋಧ ಪಕ್ಷದ ನಾಯಕನನ್ನು ಮುಂದಿಟ್ಟುಕೊಂಡಾದರು ಬಿಜೆಪಿ ನಮ್ಮನ್ನು ವಿರೋಧಿಸಲಿ!” ಎಂದು ಟ್ವೀಟ್ ಮಾಡಿ ಲೇವಡಿ ಮಾಡಿತ್ತು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ಕೇಂದ್ರ ಬಿಜೆಪಿ ಸರ್ಕಾರ ನಿರಾಕರಿಸಿದ್ದು, ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಹಾಗಾಗಿ ರಾಜ್ಯ ಬಿಜೆಪಿ ನಾಯಕರೆಲ್ಲೂ ಗ್ಯಾರೆಂಟಿಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ನಾಯಕರೇ ಇಲ್ಲದ ಕರ್ನಾಟಕ ಬಿಜೆಪಿಗೆ ವಿರೋಧ ಪಕ್ಷದ ನಾಯಕ ಸಿಗುವುದಾದರೂ ಎಲ್ಲಿಂದ?’ ಎಂದು ಕಾಂಗ್ರೆಸ್ ತಮಾಷೆ ಮಾಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ