Friday, September 20, 2024

ಪ್ರಾಯೋಗಿಕ ಆವೃತ್ತಿ

ಪಾಂಡವಪುರ | ತಹಶೀಲ್ದಾರ್ ಸೌಮ್ಯ ಲೋಕಾಯುಕ್ತ ಬಲೆಗೆ

ಪಾಂಡವಪುರ ತಹಶೀಲ್ದಾರ್ ಸೌಮ್ಯ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಗ್ರಾಮ ಲೆಕ್ಕಿಗರೊಬ್ಬರಿಂದ ವರ್ಗಾವಣೆಗಾಗಿ 40 ಸಾವಿರ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ಕೆ.ಸಿ.ಸೌಮ್ಯ ಅವರು ಗುರುವಾರ ಸಂಜೆ ಹಣ ಪಡೆಯುವಾಗ ಹಣದ ಸಮೇತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಳೆದ ನಾಲ್ಕುವರೆ ತಿಂಗಳಿಂದ ಪಾಂಡವಪುರ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಎಸ್.ಸೌಮ್ಯ ಇದೇ ತಾಲ್ಲೂಕಿನಲ್ಲಿ ಗ್ರಾಮ ಲೆಕ್ಕಿಗರಾಗಿ ಕೆಲಸ ನಿರ್ವಹಿಸುತ್ತಿದ್ದ ಮರಿಸ್ವಾಮಿ ಅವರನ್ನು ಬೇರೆ ಕಡೆಗೆ ವರ್ಗಾವಣೆ ಮಾಡುವುದಕ್ಕಾಗಿ 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಮರಿಸ್ವಾಮಿ ಲೋಕಾಯುಕ್ತರಿಗೆ ದೂರು ನೀಡಿದ್ದರು.

ಜಾಹೀರಾತು

ಅದರಂತೆ ಗುರುವಾರ ಸಂಜೆ 6.30 ಸಮಯದಲ್ಲಿ ಪಾಂಡವಪುರ  ತಹಶೀಲ್ದಾರ್  ಕಚೇರಿಯಲ್ಲಿ ಮರಿಸ್ವಾಮಿ ಅವರಿಂದ 40 ಸಾವಿರ ಲಂಚದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್‌ಪಿ ಸುನೀಲ್‌ಕುಮಾರ್, ಎಸ್‌ಐಗಳಾದ ಬ್ಯಾಟರಾಯಗೌಡ, ಮೋಹನ್‌ರೆಡ್ಡಿ, ಪ್ರಕಾಶ್ ಅವರು ತಹಸಿಲ್ದಾರ್ ಸೌಮ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ.

ಬಳಿಕ ರಾತ್ರಿ 9 ಗಂಟೆಯವರೆಗೂ ತಹಶೀಲ್ದಾರ್  ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿ,ನಂತರ ತಹಶೀಲ್ದಾರ್ ಸೌಮ್ಯ ಅವರನ್ನು ಕರೆದೊಯ್ದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!