Thursday, November 19, 2026

ಪ್ರಾಯೋಗಿಕ ಆವೃತ್ತಿ

ಅಲ್ಪಸಂಖ್ಯಾತರ ನಿಗಮ | ವಿದೇಶಿ ಸಾಲ ಯೋಜನೆಯಡಿ ವಿಧ್ಯಾಭ್ಯಾಸಕ್ಕಾಗಿ ಅರ್ಜಿ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದೇಶಿ ಸಾಲ ಯೋಜನೆಯಡಿ ವಿಧ್ಯಾಭ್ಯಾಸಕ್ಕಾಗಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದೇಶಿ ಸಾಲ ಯೋಜನೆಯಡಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ ಭಾರತ ದೇಶದ ಪ್ರತಿಷ್ಟಿತ IIT’S, IIM’S, ISC  ಸಂಸ್ಥೆಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದೇಶಿ ವಿಧ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಆಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್  www.kmdconline.karnataka.gov.in  ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ ಪ್ರತಿಯ ಜೊತೆ ಅಗತ್ಯ ದಾಖಲಾತಿಗಳನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮಂಡ್ಯ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08232-220186ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ