Friday, November 20, 2026

ಪ್ರಾಯೋಗಿಕ ಆವೃತ್ತಿ

ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ; ವಿಧಾನಸೌಧದಲ್ಲಿ ಬಿಜೆಪಿ ಮುಚ್ಚಿದ್ದ ಬಾಗಿಲನ್ನು ತೆರೆಸಿದ ಸಿದ್ದರಾಮಯ್ಯ

ವಾಸ್ತು ಸರಿಯಿಲ್ಲ ಎಂಬ ಕಾರಣದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಚ್ಚಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರದ ಬಾಗಿಲನ್ನು ತೆರೆಸಿ, ಅದೇ ಬಾಗಿಲಿನ ಮೂಲಕ ಒಳ ಪ್ರವೇಶಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಹಾಗೂ ನಾಡಿನ ಜನರಿಗೆ ವೈಜ್ಞಾನಿಕತೆಯ ಪಾಠ ಹೇಳಿದ್ದಾರೆ.

“>

ಅನ್ನಭಾಗ್ಯ ಯೋಜನೆ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು ವಾಸ್ತು ಸಮಸ್ಯೆ ಇದೆ ಎಂದು ಮುಚ್ಚಿಸಿದ್ದ ದ್ವಾರವನ್ನು ತೆರೆಸಿ ಅದೇ ದ್ವಾರದಿಂದ ಕಚೇರಿ ಪ್ರವೇಶಿಸಿ ಮೌಢ್ಯಕ್ಕೆ ತಿಲಾಂಜಲಿ ಇಟ್ಟರು.

“>

ಸಭೆ ಹಿನ್ನೆಲೆಯಲ್ಲಿ ಸಿಎಂ ಕಚೇರಿಗೆ ಆಗಮಿಸಿದಾಗ ದಕ್ಷಿಣ ದ್ವಾರ ಮುಚ್ಚಿರುವುದನ್ನು ಗಮನಿಸಿದರು, ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ವೇಳೆ, ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಅಧಿಕಾರಿಗಳ ಮಾತು ಕೇಳೀ ಸ್ವಲ್ಪ ಸಮಯ ಅಲ್ಲೇ ನಿಂತ ಸಿದ್ದರಾಮಯ್ಯ ಅವರು, ಕೂಡಲೇ ಬಾಗಿಲು ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅದರಂತೆ ಪಶ್ಚಿಮ ದ್ವಾರದಿಂದ ಒಳಗೆ ಹೋದ ಸಿಬ್ಬಂದಿ ದಕ್ಷಿಣದ ದ್ವಾರದ ಬಾಗಿಲು ತೆರೆದರು. ಬಾಗಿಲು ತೆರೆಯುತ್ತಿದ್ದಂತೆ ಅದೇ ದ್ವಾರದ ಮೂಲಕವೇ ಸಿದ್ದರಾಮಯ್ಯ ತಮ್ಮ ಕಚೇರಿ ಪ್ರವೇಶಿಸಿದರು. ಈ ವೇಳೆ ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳಿಗೆ ಪಾಠ ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ