Thursday, November 19, 2026

ಪ್ರಾಯೋಗಿಕ ಆವೃತ್ತಿ

ಜುಲೈ 6 ರಿಂದ ಮೈಶುಗರ್ ಕಬ್ಬು ಅರೆಯುವಿಕೆ ಪ್ರಾರಂಭ : ಡಾ.ಕುಮಾರ


ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಜುಲೈ 6 ರಿಂದ ಕಬ್ಬು ಅರೆಯುವಿಕೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2023- 24 ನೇ ಸಾಲಿನ ಕಬ್ಬು ಅರೆಯುವಿಕೆ ಕುರಿತಂತೆ ಸಕ್ಕರೆ ಕಾರ್ಖಾನೆಗಳ ಮುಖ್ಯಸ್ಥರೊಂದಿಗೆ ಇಂದು ಸಭೆ ನಡೆಸಿ ಮಾತನಾಡಿದರು. ಮೈಶುಗರ್ ಸಕ್ಕರೆ ಕಾರ್ಖಾನೆ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಕಬ್ಬು ಕಟಾವನ್ನು ಜುಲೈ 4 ರಿಂದ ಪ್ರಾರಂಭಿಸಲಾಗುವುದು. ಮೈಶುಗರ್ ವ್ಯಾಪ್ತಿಗೆ ಬರುವ ಹಳ್ಳಿಗಳ ಕಬ್ಬು ಬೆಳೆಗಾರರು ಕಬ್ಬನ್ನು ಬೇರೆ ಸಕ್ಕರೆ ಕಾರ್ಖಾನೆಗೆ ಮಾರಾಟ ಮಾಡಬೇಡಿ ಎಂದು ಮನವಿ ಮಾಡಿದರು.

ಮೈಶುಗರ್ ಸಕ್ಕರೆ ಕಾರ್ಖಾನೆ ಅವರು ತಮ್ನ ವ್ಯಾಪ್ತಿಯಲ್ಲಿ ಬರುವ ಹಳ್ಳಿಯ ರೈತರಿಗೆ ಜುಲೈ 4 ರಿಂದ ಕಬ್ಬು ಕಟಾವು ಮಾಡುವ ಬಗ್ಗೆ ಮನವರಿಕೆ ಹಾಗೂ ನೊಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಕ್ಕರೆ ಕಾರ್ಖಾನೆಗಳು ತಮ್ಮ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಮಾತ್ರ ಕಬ್ಬು ಖರೀದಿಸಲು ಕ್ರಮ ವಹಿಸಬೇಕು. ಅದನ್ನು ಹೊರತುಪಡಿಸಿ ಬೇರೆ ಸಕ್ಕರೆ ಕಾರ್ಖಾನೆ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ಕಬ್ಬು ಖರೀದಿಸಿ ತೊಂದರೆ ಉಂಟು ಮಾಡಿದರೆ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದರು.

ಈ  ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೃಷ್ಣ ಕುಮಾರ್, ತಹಶೀಲ್ದಾರ್ ನಿಸರ್ಗ ಪ್ರಿಯಾ, ನರಸಿಂಹ ಮೂರ್ತಿ, ಮೈಶುಗರ್ ಸಕ್ಜರೆ ಕಾರ್ಖಾನೆಯ  ಕಬ್ಬು ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್, ಕೋರ ಮಂಡಲ ಸಕ್ಕರೆ ಕಾರ್ಖಾನೆಯ ಬಾಬುರಾಜ್, ರವಿರೆಡ್ಡಿ, ಕೊಪ್ಪ  ಎನ್.ಎಸ್.ಸಿ.ಎಲ್ ನ ಸೀನಿಯರ್ ಮ್ಯಾನೇಜರ್ ಸೋಮಶೇಖರ್ ಹೆಚ್. ಎಸ್, ಭಾರತಿನಗರ ಚಾಮುಡೇಶ್ವರಿ ಸಕ್ಕರೆ ಕಾರ್ಖಾನೆಯ ಅಸಿಸೆಂಟ್ ಜನರಲ್ ಮ್ಯಾನೇಜರ್ ಮಹದೇವಪ್ರಭು,  ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ