Thursday, November 19, 2026

ಪ್ರಾಯೋಗಿಕ ಆವೃತ್ತಿ

ಕಾವೇರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ

ಮಂಡ್ಯ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿರುವ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಸಾಂಸ್ಕೃತಿಕ ಕನ್ನಡ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು.

ಕಾಲೇಜಿನ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಸಾಂಸ್ಕೃತಿಕ ಹುಡುಗಿಯ ತೊಡುಗೆಗಳನ್ನು ತೊಟ್ಟು ಸಂಭ್ರಮಿಸಿದರು. ಎತ್ತಿನ ಗಾಡಿ ಮೆರವಣಿಗೆ ನಡೆಸಿದರು.

ಸಂಸ್ಥೆಯ ಕಾರ್ಯದರ್ಶಿ ಪ್ರೊ.ಟಿ.ನಾಗೇಂದ್ರ ಅವರು ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳನ್ನು ಕೇವಲ ಪಠ್ಯ ವಿಷಯಕ್ಕಷ್ಟೇ ಸೀಮಿತಗೊಳಿಸದೆ ಗ್ರಾಮೀಣ ಜನರ ಬದುಕು, ಆಚಾರ-ವಿಚಾರ, ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಇಂದಿನ ಯುವಕ- ಯುವತಿಯರು ಆಧುನಿಕ ಸಂಸ್ಕೃತಿಗೆ ಮಾರುಹೋಗಿ ನಮ್ಮ ಮೂಲ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಗ್ರಾಮೀಣ ಸೊಗಡನ್ನು ಮತ್ತು ಅದರ ಮಹತ್ವವನ್ನು ಅರಿಯದೆ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಅಪ್ಪಿಕೊಂಡಿದ್ದಾರೆ. ಅವರಿಗೆ ನಮ್ಮ ಜನಪದ ಕಲೆಗಳಾದ ವೀರಗಾಸೆ, ಪೂಜಾ ಕುಣಿತ, ಕಟ ಕುಣಿತ,ಕುಂಭಮೇಳ ಇತ್ಯಾದಿ ಕಲೆಗಳನ್ನು ಪರಿಚಯಿಸುವ ಮೂಲಕ ಗ್ರಾಮೀಣ ಪ್ರದೇಶದ ಜನಪದ ಪರಂಪರೆಯನ್ನು ಪರಿಚಯಿಸುವುದು ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ.ರಾಜ್, ಪ್ರಾಂಶುಪಾಲ ಪ್ರೊ.ಎ.ಎಸ್ ಶ್ರೀಕಂಠಪ್ಪ, ಉಪ ಪ್ರಾಂಶುಪಾಲರಾದ ಪ್ರೊ ಮಂಜುನಾಥ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ