Thursday, November 19, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ನಕಲಿ ಆದಾಯ ಪ್ರಮಾಣಪತ್ರ ನೀಡಿದ ಗ್ರಾಮ ಲೆಕ್ಕಿಗನ ವಿರುದ್ಧ ಕ್ರಮಕ್ಕೆ ಆಗ್ರಹ

ಮದ್ದೂರು ತಾಲ್ಲೂಕು ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಟಿ ಪಿ ಮೋಹನ್ ಹಾಗೂ ಪ್ರಥಮ ದರ್ಜೆ ಸಹಾಯಕಿ ಮಹದೇವಮ್ಮ ಅವರು ಕೆಲವರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿದ್ದು, ಅವರ ವಿರುದ್ದ ಮಂಡ್ಯ ಜಿಲ್ಲಾಡಳಿತ ಕಾನೂನು ಕ್ರಮ ಜರುಗಿಸಬೇಕೆಂದು ಮದ್ದೂರು ಪಟ್ಟಣದ ನಿವಾಸಿ ರಮೇಶ್ ಒತ್ತಾಯಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಕಲಿ ಆದಾಯ ಪ್ರಮಾಣ ಪತ್ರ ನೀಡಿ ಸಾರ್ವಜನಿಕರಿಗೆ ಮತ್ತು ಸರ್ಕಾರಕ್ಕೆ ಮೋಸ ಮಾಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು, ಈ ಬಗ್ಗೆ ತನಿಖೆ ನಡೆಸುವಂತೆ 2016ರಲ್ಲೇ ಎಡಿಸಿ ಅವರಿಗೆ ಆದೇಶ ಮಾಡಿದ್ದಾರೆ. ಆದರೆ ಈ ಬಗ್ಗೆ ಇದು ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ ಎಂದು ದೂರಿದರು.

ನಕಲು ಆದಾಯ ಪ್ರಮಾಣ ಪತ್ರ ನೀಡಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಇ.ವಿ. ರಮಣರೆಡ್ಡಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಅವರಿಗೆ ನಾನು ಮನವಿ ಮಾಡಿದ್ದೇ, ನನ್ನ ಮನವಿಗೆ ಸಮ್ಮತಿ ನೀಡಿದ ಸರ್ಕಾರ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ.  ಆದರೆ 6 ವರ್ಷಗಳಿಂದ ಅಪರ ಜಿಲ್ಲಾಧಿಕಾರಿಗಳು ತಮಗೆ ಸೂಕ್ತ ನ್ಯಾಯ ಒದಗಿಸದೇ ನನ್ನನ್ನು ಅಲೆದಾಡಿಸಿದ್ದಾರೆ. ಅಲ್ಲದೇ ಪೈಲ್ ಅನ್ನು ತಮ್ಮಲ್ಲಿಯೇ ಇಟ್ಟುಕೊಂಡು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಆದ್ದರಿಂದ ಕೂಡಲೇ ಜಿಲ್ಲಾಡಳಿತ ತಮಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ