Thursday, November 19, 2026

ಪ್ರಾಯೋಗಿಕ ಆವೃತ್ತಿ

ನಗರಸಭೆಗೆ ಜಿಲ್ಲಾಧಿಕಾರಿ ಭೇಟಿ ; ನಗರದ ಸ್ವಚ್ಚತೆಗೆ ಅಧಿಕಾರಿಗಳಿಗೆ ನಿರ್ದೇಶನ

ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ನಗರಸಭೆಗೆ ಭೇಟಿ ನೀಡಿ, ಅಧಿಕಾರಿ ಹಾಗೂ ಸಿಬ್ಬಂದಿಗಳ ಜತೆ ಮಾತುಕತೆ ನಡೆಸಿ, ವಿವಿಧ ಸಮಸ್ಯೆಗಳು ಹಾಗೂ ಸಾರ್ವಜನಿಕ ವಲಯ ಸಮಸ್ಯೆ ಕುರಿತಂತೆ ಸಮಗ್ರ ಮಾಹಿತಿ ಪಡೆದು ಕ್ರಮಕ್ಕೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಸ್ವಚ್ಚತೆ, ಕುಡಿಯುವ ನೀರು, ಸಾರ್ವಜನಿಕ ಶೌಚಾಲಯ ಕುರಿತಂತೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜತೆ ಚರ್ಚಿಸಿ, ನಾಗರಿಕರ ಮೂಲ ಸೌಕರ್ಯದ ವಿಷಯಕ್ಕೆ ಆದ್ಯತೆ ನೀಡಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ರಸ್ತೆಗಳನ್ನು ಪ್ರತಿ ದಿನ ಸ್ವಚ್ಚಗೊಳಿಸುವುದು ನಗರಸಭೆ ಕರ್ತವ್ಯ. ಹಾಗಾಗಿ ನಗರವನ್ನು ಸ್ವಚ್ಚತೆಯಿಂದ ನೋಡಿಕೊಳ್ಳಿ,  ನಗರವನ್ನು ಸ್ವಚ್ಛ ಮಾಡುವ ಪೌರಕಾರ್ಮಿಕರ ಸ್ವಚ್ಚತಾ ಹಾಗೂ ಅವರ ಮೂಲಭೂತ ಸೌಕರ್ಯಗಳ ಬಗ್ಗೆ ಗಮನಹರಿಸಬೇಕು. ವಿವಿಧ ವಾರ್ಡ್ ಗಳಲ್ಲಿ ಇರುವ ಸಮಸ್ಯೆಗಳನ್ನು ಆಲಿಸಿ ನಿವಾರಣೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆಗಳ ಬೀದಿ ದೀಪಗಳ ಕಾರ್ಯ ನಿರ್ವಹಣೆ ಬಗ್ಗೆ ಪರಿಶೀಲಿಸ ಬೇಕು. ನಗರದ ಉದ್ಯಾನವನಗಳಿಗೆ ಕುಡಿಯುವ ನೀರು, ವಿದ್ಯುತ್, ಸಾರ್ವಜನಿಕ ಶೌಚಾಲಯಗಳಂತಹ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ನಗರಸಭೆ ಆಯುಕ್ತ ಮಂಜುನಾಥ್, ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ, ಎಇಇ ರುದ್ರೇಗೌಡ ಸೇರಿದಂತೆ ಇನ್ನಿತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ