ಬಿಜೆಪಿ ನಾಯಕ ಪ್ರವೇಜ್ ಶುಕ್ಲಾ ಎಂಬುವವನು ಆದಿವಾಸಿ ಯುವಕನ ಮುಖದ ಮೇಲೆ ಮೂತ್ರ ವಿಸರ್ಜಿಸಿ ಅವಮಾನ ಮಾಡಿದ ಪ್ರಕರಣಕ್ಕೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಖಂಡನೆ ವ್ಯಕ್ತಪಡಿಸಿದ್ದಾರೆ. ಭೋಪಾಲ್ನ ಸಿಎಂ ಕಚೇರಿಯಲ್ಲಿ ಸಂತ್ರಸ್ತ ಯುವಕ ದಶರಥ ರಾವತ್ರನ್ನು ಭೇಟಿ ಮಾಡಿದ ಅವರು ಯುವಕನ ಪಾದ ತೊಳೆದು ಕ್ಷಮೆ ಯಾಚಿಸಿದ್ದಾರೆ.
#WATCH | Madhya Pradesh Chief Minister Shivraj Singh Chouhan meets Dashmat Rawat and washes his feet at CM House in Bhopal. In a viral video from Sidhi, accused Pravesh Shukla was seen urinating on Rawat.
CM tells him, “…I was pained to see that video. I apologise to you.… pic.twitter.com/5il2c3QATP
— ANI (@ANI) July 6, 2023
“>
“ಆ ವಿಡಿಯೋ ನೋಡಿ ನನಗೆ ನೋವಾಗಿದೆ. ನಾನು ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಜನರು ನನಗೆ ದೇವರಂತೆ” ಎಂದು ಚೌಹಾಣ್ ರಾವತ್ಗೆ ಹೇಳಿದ್ದಾರೆ. ದಶರಥ ರಾವತ್ರವರ ಪಾದ ತೊಳೆದು, ಹೂಮಾಲೆ ಹಾಕಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಮಧ್ಯಪ್ರದೇಶದ ಸಿಧಿ ಬಿಜೆಪಿ ಶಾಸಕ ಕೇದಾರ್ ನಾಥ್ ಶುಕ್ಲಾರವರ ಬೆಂಬಲಿಗ ಎನ್ನಲಾದ ಪ್ರವೇಶ್ ಶುಕ್ಲಾ ಎಂಬಾತ ಆದಿವಾಸಿ ಬುಡಕಟ್ಟು ಸಮುದಾಯದ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಸಿಧಿ ಜಿಲ್ಲೆಯಲ್ಲಿ ವರದಿಯಾಗಿತ್ತು. ಮನುಷ್ಯರೆಲ್ಲರೂ ತಲೆತಗ್ಗಿಸಬೇಕಾದ ಅಮಾನವೀಯ ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಆತನ ಮನೆಯನ್ನು ನೆಲಸಮಗೊಳಿಸಲಾಗಿದೆ ಎನ್ನಲಾಗಿದೆ.
ಬಿಜೆಪಿ ಆಡಳಿತದಲ್ಲಿ ಆದಿವಾಸಿ ಸಹೋದರ ಸಹೋದರಿಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಧ್ಯಪ್ರದೇಶದ ಬಿಜೆಪಿ ನಾಯಕನ ಅಮಾನವೀಯ ಅಪರಾಧದಿಂದ ಇಡೀ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ. ಇದು ಆದಿವಾಸಿಗಳು ಮತ್ತು ದಲಿತರ ಮೇಲಿನ ಬಿಜೆಪಿಯ ದ್ವೇಷದ ಅಸಹ್ಯಕರ ಮುಖ ಮತ್ತು ನೈಜ ಸ್ವರೂಪ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.




