Friday, September 20, 2024

ಪ್ರಾಯೋಗಿಕ ಆವೃತ್ತಿ

ಬಾಬು ಜಗಜೀವನ್ ರಾಂ ತತ್ವ – ಆದರ್ಶ ರೂಢಿಸಿಕೊಳ್ಳಿ : ಸಚಿವ ಚಲುವರಾಯಸ್ವಾಮಿ

ಹಲವು ಜನಪರ ಯೋಜನೆಗಳನ್ನು ನೀಡಿದ ರಾಷ್ಟ್ರೀಯ ನಾಯಕ ಜಗಜೀವನ್ ರಾಂ ಅವರ ತತ್ವ ಹಾಗೂ ಆದರ್ಶಗಳನ್ನು ಎಲ್ಲರೂ ರೂಢಿಸಿಕೊಳ್ಳಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು.

ಬಾಬು ಜಗಜೀವನ್ ರಾಂ ಅವರ ಪುಣ್ಯ ಸ್ಮರಣೆಯ ಅಂಗವಾಗಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಇರುವ ಬಾಬು ಜಗಜೀವನ್ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಹಸಿರು ಕ್ರಾಂತಿಯ ಹರಿಕರ ಬಾಬು ಜಗಜೀವನ್ ರಾಂ ಅವರು ಸೃಷ್ಟಿಸಿದ ಹಸಿರು ಕ್ರಾಂತಿಯಿಂದ ದೇಶದಲ್ಲಿ ಬಡವರಿಗೆ ಆಹಾರದ ಕೊರತೆ ದೂರವಾಯಿತು ಎಂದರು.

ಜಾಹೀರಾತು

ಅಧಿಕಾರ ಮತ್ತು ಆಸ್ತಿಯಿಂದ ಗಳಿಸಲಾಗದ ಕೀರ್ತಿಯನ್ನು ಸೇವೆ ಹಾಗೂ ತ್ಯಾಗದಿಂದ ಗಳಿಸಬಹುದೆಂದು ಬಾಬು ಜಗಜೀವನರಾಮ್ ಅವರ ಬದುಕು ತಿಳಿಸಿ ಕೊಡುತ್ತದೆ. ಬಾಬು ಜಗಜೀವನರಾಮ್ ನಿಸ್ವಾರ್ಥ ಸೇವೆ, ಸ್ವಾತಂತ್ರ‍್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದಿಂದ ಸಮಾಜಕ್ಕೆ ಆದರ್ಶ ವ್ಯಕ್ತಿಯಾಗಿದ್ದಾರೆ ಎಂದರು.

ವನ ಮಹೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಹಸಿರೀಕರಣ ಹೆಚ್ಚಿಸಲು ಗಿಡ ನಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸರ್ಕಾರ ವನಮಹೋತ್ಸವದ ಅಂಗವಾಗಿ  5 ಕೋಟಿ ಗಿಡ ನೆಡುವ ಗುರಿ ಹೊಂದಿದೆ. ಈ ಹಿನ್ನಲೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಜನಪ್ರತಿನಿಧಿಗಳು ತೆರಳಿದಾಗ ಆ ಸ್ಥಳದಲ್ಲಿ ಗಿಡ ನಡುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರನ್ನು ಪ್ರೇರಿಪಿಸಲಾಗುತ್ತಿದೆ ಎಂದರು.

ಇದೇ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಾಬು ಬಂಡೀಸಿದ್ದೇಗೌಡ, ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!