Thursday, September 19, 2024

ಪ್ರಾಯೋಗಿಕ ಆವೃತ್ತಿ

ಪಂಚಾಯತ್ ರಾಜ್ ವ್ಯವಸ್ಥೆ ಯಶಸ್ವಿಯಾಗಿ ಜಾರಿಗೊಳಿಸಿದ ರಾಜ್ಯ ಕರ್ನಾಟಕ : ದಿವ್ಯಾಪ್ರಭು

ಮೊಟ್ಟಮೊದಲ ಬಾರಿಗೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಮುಂಚೂಣಿ ರಾಜ್ಯ ಕರ್ನಾಟಕ ಎಂಬ ಹೆಮ್ಮೆ ನಮ್ಮದು ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವ್ಯಾಪ್ರಭು ತಿಳಿಸಿದರು.

ಮಂಡ್ಯ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಕಾವೇರಿ ಸಭಾಂಗಣದಲ್ಲಿ ನಡೆದ ‘ಪಂಚಾಯತ್ ರಾಜ್’ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೂರು ಹಂತದ ವ್ಯವಸ್ಥೆಯಲ್ಲಿ ಎಲ್ಲಾ ವರ್ಗದ ಜನರನ್ನೂ ಗಣನೆಗೆ ತೆಗೆದುಕೊಂಡಾಗ ಮಾತ್ರ ಪಂಚಾಯತ್ ರಾಜ್ ವ್ಯವಸ್ಥೆಯು ಯಶಸ್ವಿಯಾಗಲು ಸಾಧ್ಯ ಎಂದರು.

ಸ್ಥಳೀಯ ಸರ್ಕಾರಿ ವ್ಯವಸ್ಥೆಯಲ್ಲಿ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿ ನಡುವೆ ಸಮನ್ವಯತೆ ಬಹಳ ಮುಖ್ಯ. ಪ್ರತಿಯೊಬ್ಬರೂ ಸಹಕಾರದಿಂದ ಕೈಜೋಡಿಸಿ ಕೆಲಸ ನಿರ್ವಹಿಸಿದಾಗ ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಸಾಧ್ಯವಾಗುತ್ತದೆ ಎಂದರು.

ಈ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಯಲ್ಲಿ ಪರಸ್ಪರ ಸಂವಹನದ ಹಾದಿಯು ಮುಕ್ತವಾಗಿರಬೇಕು. ಪ್ರತಿಯೊಬ್ಬರ ಅಭಿಪ್ರಾಯಕ್ಕೂ ಮನ್ನಣೆ ಕೊಡಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳಾದ ಪ್ರಭುಸ್ವಾಮಿ, ಉಪಕಾರ್ಯದರ್ಶಿ(ಆಡಳಿತ) ಸರಸ್ವತಿ,ಉಪಕಾರ್ಯದರ್ಶಿ(ಅಭಿವೃದ್ಧಿ) ಜಿ.ಧನರಾಜು, ಯೋಜನಾ ನಿರ್ದೇಶಕ ಧನರಾಜ್ ಬೊಳಾರೆ, ಸಹಾಯಕ ಕಾರ್ಯದರ್ಶಿ ಸುಬ್ರಹ್ಮಣ್ಯ ಶರ್ಮ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಎ.ಬಿ.ವೇಣು ಸೇರಿದಂತೆ ಇತರರು ಉಪಸ್ಥಿತರಿದ್ದರು. .

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!