ತಂಬಾಕು ಮುಕ್ತ ಯುವಜನಾಂಗವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಮಾನ್ಯ ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹಮ್ಮಿಕೊಂಡಿರುವ ನಿರಂತರ ಅರಿವು ಕಾರ್ಯಾಗಾರ ಶ್ರೀರಂಗಪಟ್ಟಣ ತಾಲ್ಲೂಕಿನ ಗಾಮನಹಳ್ಳಿ ಗ್ರಾಮದ ಜ್ಞಾನಭಾರತಿ ಪ್ರೌಢಶಾಲೆ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶಾಲೆಯ ಒಟ್ಟು 112 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳಿಗೆ ತಂಬಾಕು ನಿಯಂತ್ರಣ ಕಾರ್ಯಕ್ರಮದ ತಂಬಾಕು ಉತ್ಪನ್ನಗಳ ಪ್ರತ್ಯಕ್ಷ ಹಾಗೂ ಪರೋಕ್ಷ ಬಳಕೆಯಿಂದ ಉಂಟಾಗುತ್ತಿರುವ ಅನನುಕೂಲಗಳ ಬಗೆಗಿನ ನೈಜ ಚಿತ್ರ ಹಾಗೂ ವಿಡಿಯೋ ಮೂಲಕ ಅರಿವು ಮೂಡಿಸಿ, ಕರಪತ್ರಗಳನ್ನು ವಿತರಿಸಲಾಯಿತು. ಮಕ್ಕಳು ಅವರ ಜೀವನದಲ್ಲಿ ಎಂದೆಂದಿಗೂ ತಂಬಾಕು ಬಳಕೆ ಮಾಡದಂತೆ ಹಾಗೂ ತಂಬಾಕು ಮುಕ್ತ ಸಮಾಜ ನಿರ್ಮಿಸಲು ಕೈಜೋಡಿಸಲು ಪ್ರತಿಜ್ಞಾ ವಿಧಿ ಭೋಧಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಲಹೆಗಾರ ತಿಮ್ಮರಾಜು ಎಸ್ ಎನ್, ಜಿಲ್ಲಾ ಸಮಾಜ ಕಾರ್ಯಕರ್ತರಾದ ಮೋಹನ್ ಕುಮಾರ್ ವೈಕೆ, ಗಾಮನಹಳ್ಳಿ ಸಮುದಾಯ ಆರೋಗ್ಯ ಅಧಿಕಾರಿ ಶಿವರಾಜು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ರೇಣುಕಾ ಆಶಾ ಕಾರ್ಯಕರ್ತರು ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.




