Thursday, November 19, 2026

ಪ್ರಾಯೋಗಿಕ ಆವೃತ್ತಿ

ಸಮಾನ ಶಿಕ್ಷಣ ನೀತಿ ರೂಪಿಸಲು ಅನುದಾನ ನೀಡದ ಬಜೆಟ್ – ವೆಂಕಟಗಿರಿಯಯ್ಯ

ಕೇಂದ್ರ ಬಿಜೆಪಿ ಸರ್ಕಾರದ “ರಾಷ್ಟ್ರೀಯ ಶಿಕ್ಷಣ ನೀತಿ”ಯನ್ನು ಕೈಬಿಟ್ಟಿರುವ ಸಿಎಂ ಸಿದ್ದರಾಮಯ್ಯನವರು ರಾಜ್ಯದಲ್ಲಿ ಶಿಕ್ಷಣ ತಜ್ಞರನ್ನೊಳಗೊಂಡ ಶಿಕ್ಷಣ ಆಯೋಗವನ್ನು ರಚಿಸಿ, ಸಮಾನ ಶಿಕ್ಷಣ ನೀತಿಯನ್ನು ರೂಪಿಸಿ, ಜಾರಿಗೊಳಿಸಲು ಅನುದಾನ ಘೋಷಿಸಬೇಕೆಂಬ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ದೂರಿದರು.

ಜಾಹೀರಾತು

ಮಂಡ್ಯದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಾತಿಯ ಭೂ ರಹಿತ, ಕೃಷಿ ಕೂಲಿ ಕಾರ್ಮಿಕರಿಗೆ ಭೂಮಿ ಹಕ್ಕು ನೀಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡದಿರುವುದು ಖಂಡನೀಯ.ರೈತ ವಿರೋಧಿಯಾದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ನಿರ್ಧರಿಸಿರುವ ಸಿದ್ದರಾಮಯ್ಯ ಅವರು, ಕೃಷಿ ತಜ್ಞ ಡಾ.ಸ್ವಾಮಿನಾಥನ್ ಆಯೋಗದ ವರದಿಯಂತೆ ವೈಜ್ಞಾನಿಕ ಬೆಲೆ ಬಗ್ಗೆ ಚಕಾರವೆತ್ತದದಿರುವುದು ವಿಪರ್ಯಾಸ ಎಂದರು.

ಸಿದ್ದರಾಮಯ್ಯನವರು ಮಂಡ್ಯ ಜಿಲ್ಲೆಗೆ ಮಲತಾಯಿ ಧೋರಣೆ ಪ್ರದರ್ಶಿಸಿದ್ದಾರೆ. ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ ವಿಪರೀತ ಅಪಘಾತಗಳು ಸಂಭವಿಸುತ್ತಿದ್ದು, ಮಂಡ್ಯ ನಗರಕ್ಕೆ ಸೂಪರ್ ಸೈಫಾಲಿಟಿ ಆಸ್ಪತ್ರೆಯನ್ನು ಈ ನಿರೀಕ್ಷಿಸಲಾಗಿತ್ತು. ಆದರೆ ಅದನ್ನು ಮೈಸೂರಿಗೆ ನೀಡಲಾಗಿದೆ ಎಂದರು ದೂರಿದರು.

ಗೋಷ್ಠಿಯಲ್ಲಿ ದಸಂಸ ವಿಭಾಗೀಯ ಸಂಚಾಲಕ ಅನಿಲ್ ಕುಮಾರ್, ಜಿಲ್ಲಾಧ್ಯಕ್ಷ ಕೆ.ಎಂ.ಶ್ರೀನಿವಾಸ್, ಮುಖಂಡರಾದ ಹರಿಕುಮಾರ್, ಸೋಮಶೇಖರ್ ಮೇನಾಗ್ರ, ಬಿ.ಆನಂದ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ