ದೇವಮ್ಮ ಪುಟ್ಟಚ್ಚಿ ಸಿದ್ದೇಗೌಡ ಮತ್ತು ಡಾ.ವಿ.ಟಿ.ಸುಶೀಲ ಜಯರಾಮ್ ಟ್ರಸ್ಟ್ ವತಿಯಿಂದ ಜು.15ರಂದು ಬೆಳಿಗ್ಗೆ 10.15ಕ್ಕೆ ನಗರದ ಗಾಂಧಿಭವನದಲ್ಲಿ ಶತಾಯುಷಿ ಸಾಹಿತಿ ದಿವಂಗತ ಸೀತಾಸುತರವರ 125ನೇ ವರ್ಷದ ಸಂಸ್ಮರಣೆ ಮತ್ತು ಡಾ.ವಿ.ಟಿ.ಸುಶೀಲ ಜಯರಾಮ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಟ್ರಸ್ಟ್ ಕಾರ್ಯದರ್ಶಿ ಡಾ.ಕೆ.ಎಸ್.ಜಯರಾಮ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ಪ್ರಾಧ್ಯಾಪಕ ಡಾ.ಡಿ.ಕೆ.ರಾಜೇಂದ್ರ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮೈಸೂರಿನ ವೀರಯೋಧ ಸಕ್ರಿಯ ನಾಯಕ ಅವರಿಗೆ ಮರಣೋತ್ತರ ದೇಶ ಸೇವಾ ಪ್ರಶಸ್ತಿ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಡಾ.ಎಂ.ಜಿ.ಮಂಜುನಾಥ್ ಅವರಿಗೆ ಸಾಹಿತ್ಯ ಸೇವಾ ಪ್ರಶಸ್ತಿ ಹಾಗೂ ಆದಿಚುಂಚನಗಿರಿ ಮೆಡಿಕಲ್ ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಡಾ.ಕೆ.ಎಂ.ಶಿವಕುಮಾರ್ಗೆ ವೈದ್ಯಕೀಯ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.
ಸೀತಾಸುತರನ್ನು ಕುರಿತು ಶ್ರೀಮತಿ ದೇವಮ್ಮ ಪುಟ್ಟಚ್ಚಿ ಸಿದ್ದೇಗೌಡ ಸಾಂಸ್ಕೃತಿಕ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ದೊರೆಸ್ವಾಮಿ ಮಾತನಾಡುವರು. ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ಐದು ಮಂದಿ ವೀರ ಯೋಧರಿಗೆ ವಿಶೇಷ ಗೌರವ ಸಮರ್ಪಣೆ ಮಾಡಲಾಗುವುದು. ನಂತರ ಗುರುದೇವ ಲಲಿತಾ ಕಲಾ ಅಕಾಡೆಮಿಯ ಡಾ.ಚೇತನಾ ರಾಧಾಕೃಷ್ಣ ಅವರ ನಿರ್ದೇಶನದಲ್ಲಿ ಭರತನಾಟ್ಯ ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಟ್ರಸ್ಟ್ ನ ಶೇಖರ್, ಪ್ರಶಾಂತ್, ಲೋಕೇಶ್, ಸುರೇಶ್ ಉಪಸ್ಥಿತರಿದ್ದರು.




