Thursday, November 19, 2026

ಪ್ರಾಯೋಗಿಕ ಆವೃತ್ತಿ

ಜುಲೈ 15 ಕ್ಕೆ ಮಂಡ್ಯ ವಿ.ವಿಯ ಸಾಂಸ್ಕೃತಿಕ ಹಬ್ಬ

ಮಂಡ್ಯ ವಿಶ್ವವಿದ್ಯಾಲಯದಲ್ಲಿ ಜುಲೈ 15 ರಂದು ಬೆಳಿಗ್ಗೆ 9 ಗಂಟೆಗೆ ವಿವಿ ಆವರಣದಲ್ಲಿ ಸಾಂಸ್ಕೃತಿಕ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಾಂಸ್ಕೃತಿಕ ಹಬ್ಬವನ್ನು ಉದ್ಘಾಟಿಸಲಿದ್ದು, ಮಂಡ್ಯ ವಿವಿ ಕುಲಪತಿ ಅಧ್ಯಕ್ಷತೆ ವಹಿಸುವವರು. ಮಂಡ್ಯ ಶಾಸಕ ಪಿ ರವಿಕುಮಾರ್ ಅವರು ಬಹುಮಾನ ವಿತರಣೆ ಮಾಡುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ವಿಧಾನಸಭಾ ಶಾಸಕರಾದ ಪಿ.ಎಂ ನರೇಂದ್ರಸ್ವಾಮಿ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಹೆಚ್ ಟಿ ಮಂಜುನಾಥ್, ಕೆ.ಎಂ ಉದಯ್ ಭಾಗವಹಿಸುವರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ