Thursday, November 19, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಸ್ಕೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಮಂಡ್ಯದ ಪಿಇಎಸ್ ಕ್ರೀಡಾಂಗಣದಲ್ಲಿ ನಡೆದ ನೇರ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮದ್ದೂರು ತಾಲ್ಲೂಕಿನ ಭಾರತೀ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದಿಂದ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆಂದು ಶಾಲೆಯ ಮುಖ್ಯಶಿಕ್ಷಕಿ ಎಚ್.ಪಿ.ಪ್ರತಿಮಾ ತಿಳಿಸಿದ್ದಾರೆ.

8ನೇ ತರಗತಿಯ ವಾಸುದೇವ್ ಹಾಗೂ ಕಿಶೋರ್ ಸ್ಕೇಟಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬ್ಯಾಸ್ಕೇಟ್ ಬಾಲ್ ಸ್ಪರ್ಧೆ
ಮಂಡ್ಯದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ ನಡೆದ ಬ್ಯಾಸ್ಕೇಟ್ಬಾಲ್ ಸ್ಪರ್ಧೆಯಲ್ಲಿ 7 ನೇ ತರಗತಿಯ ಯದುನಂದನ್, ಸ್ವಾತಿಕ್, ದ್ರುಪದ್, ಗಗನ್ದೀಪ್, ಕೆ.ಎಂ.ಪ್ರೀತಮ್ ಅವರ ತಂಡ ದ್ವೀತಿಯ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈಜು ಸ್ಪರ್ಧೆ
ಮಂಡ್ಯದ ಪಿಇಎಸ್ ಕ್ರೀಡಾಂಗಣದಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ 8 ನೇ ತರಗತಿಯ ಆರ್.ಧನ್ಯತ 200 ಮೀಟರ್ ಮತ್ತು 50 ಮೀಟರ್ ಬ್ಯಾಕ್ ಸ್ಟ್ರೋಕ್ನಲ್ಲಿ ಪ್ರಥಮ ಸ್ಥಾನ, 50 ಮೀಟರ್ ಫ್ರೀ ಸ್ಟೈಲ್ ನಲ್ಲಿ ದ್ವೀತಿಯ ಸ್ಥಾನ ಪಡೆದಿದ್ದಾರೆ. 8ನೇ ತರಗತಿಯ ಕೆ.ಎಸ್.ಹನ್ಸಿಕಾ, ಫ್ರೀಸ್ಟೈಲ್ನಲ್ಲಿ 100 ಮೀಟರ್ ಪ್ರಥಮ ಹಾಗೂ 50 ಮೀಟರ್ ದ್ವಿತೀಯ ಸ್ಥಾನ, ಎಚ್.ವಂಶಿಕ 100 ಮೀಟರ್ನಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ವಿಜೇತರಾದ ವಿದ್ಯಾರ್ಥಿಗಳನ್ನು ಭಾರತೀ ವಿದ್ಯಾಸಂಸ್ಥೆಯ ಅಧ್ಯಕ್ಷ ಮಧು ಜಿ.ಮಾದೇಗೌಡ, ಪ್ರಾಂಶುಪಾಲ ಮಲ್ಲಿಕಾರ್ಜುನ್, ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜು ಅಭಿನಂದಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ