Thursday, November 19, 2026

ಪ್ರಾಯೋಗಿಕ ಆವೃತ್ತಿ

ಆಷಾಡ ಶುಕ್ರವಾರ | ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ

ಕೊನೆಯ ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಮದ್ದೂರು ತಾಲ್ಲೂಕು ಕೆ.ಎಂ.ದೊಡ್ಡಿಯ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜಾ ಕೈಕಂರ್ಯಗಳು ಜರುಗಿತು.

ಚಾಮುಂಡೇಶ್ವರಿ ವಿಗ್ರಹವನ್ನು ಗಂಧದ ಅಲಂಕಾರ ಮತ್ತು ತಾವರೆ ಹೂವಿನ ಹಾರ ಹಾಗೂ ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿದ್ದು ಭಕ್ತರ ಗಮನ ಸೆಳೆಯಿತು. ದೇವಾಲಯದ ಪ್ರಧಾನ ಅರ್ಚಕ ಕಾತರ್ಿಕ್ಆರಾಧ್ಯ ಅವರ ನೇತೃತ್ವದಲ್ಲಿ ವಿಶೇಷಪೂಜೆ ಕಾರ್ಯಕ್ರಮಗಳು ನಡೆಯಿತು. ಭಕ್ತರು ಸರದಿಯಲ್ಲಿ ಆಗಮಿಸಿ ದೇವಿ ದರ್ಶನ ಪಡೆದರು. ದೇವಾಲಯದಲ್ಲಿ ಬೆಳಿಗ್ಗೆಯಿಂದಲೂ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು.

ದೇವಸ್ಥಾನಕ್ಕೆ ಆಗಮಿಸಿ ನೂರಾರು ಭಕ್ತಾಧಿಗಳು ನಿಂಬೆಹಣ್ಣು, ಬೆಲ್ಲದ ಆರತಿ ಮೂಲಕ ಪೂಜೆ ಸಲ್ಲಿಸಿ ತಾಯಿ ಚಾಮುಂಡೇಶ್ವರಿ ಎಲ್ಲರ ಕಷ್ಟ ಕಾರ್ಪಣ್ಯವನ್ನು ದೂರವಾಗಲಿ ಆ ತಾಯಿಯ ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಬೇಡಿಕೊಂಡರು.

ಸುತ್ತ-ಮುತ್ತಲ ಗ್ರಾಮದ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು ಬಂದಂತಹ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ