Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಜು.21ರಂದು ರೈತ ಹುತಾತ್ಮರ ದಿನಾಚರಣೆ

ನರಗುಂದ-ನವಲಗುಂದದಲ್ಲಿ ನಡೆದ ಗೋಲಿಬಾರ್‌ನಲ್ಲಿ ರೈತರು ಮೃತಪಟ್ಟು ಜು.21ಕ್ಕೆ 43 ವರ್ಷಗಳಾಗಿವೆ. ಈ ಹಿನ್ನಲೆಯಲ್ಲಿ ಅಂದು ನಗರದಲ್ಲಿ 43ನೇ ರೈತ ಹುತಾತ್ಮರ ದಿನಾಚರಣೆ ಹಾಗೂ ರೈತ ಚಳವಳಿಯ ಮುಂದಿನ ಹೋರಾಟದ ಘೋಷಣಾ ಸಮಾವೇಶ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತಸಂಘದ(ರೈತಬಣ) ರಾಜ್ಯಾಧ್ಯಕ್ಷ ಇ.ಎನ್.ಕೃಷ್ಣೇಗೌಡ ಇಂಗಲಗುಪ್ಪೆ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರೈತ ಸಾಲಗಾರನಲ್ಲ, ಸರಕಾರವೇ ಬಾಕಿದಾರ” ಘೋಷಣೆಯೊಂದಿಗೆ ಈ ಸಮಾವೇಶ ಸಂಘಟಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಸಿಲ್ವರ್ ಜ್ಯೂಬಿಲಿ ಪಾರ್ಕ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜನಪದ ಮತ್ತು ಸಾಂಸ್ಕೃತಿಕ ಕಲಾ ತಂಡಗಳ ಬೃಹತ್ ಮೆರವಣಿಗೆ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿ ಕಚೇರಿ ಬಳಿ ಸಮಾವೇಶ ನಡೆಸಲಾಗುವುದು ಎಂದರು.

ರೈತ ಹೋರಾಟಗಾರರಾದ ಮಹೇಶ್ವರ್‌ಸ್ವಾಮಿ, ಶಿವಾನಂದ ಮೊಗಳಿಹಾಳ್, ರವಿ ಪಾಟೀಲ್, ಮಂಜು ಪಾಳ್ಯ, ವೆಂಕಟೇಶ್, ಕೆಂಪರಾಜು, ಹರಪನಹಳ್ಳಿ ಲೋಕೇಶ್, ರೈತಸಂಘದ ಕಾನೂನು ಸಲಹೆಗಾರ ಸಿ.ಲಿಂಗರಾಜು ಸೇರಿದಂತೆ ಹಲವು ಪ್ರಮುಖರು ಭಾಗವಹಿಸುವರು. ಈ ಸಂದರ್ಭದಲ್ಲಿ ರೈತರ ಪರವಾಗಿ ರಾಜ್ಯ ಸರಕಾರಕ್ಕೆ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ(ರೈತಬಣ)ದ ರಾಜ್ಯ ಗೌರವಾಧ್ಯಕ್ಷ ಎಚ್.ಎಸ್.ಚಂದ್ರಶೇಕರ್ ಹೆಮ್ಮಿಗೆ, ಜಿಲ್ಲಾಧ್ಯಕ್ಷ ಟಿ.ಎಂ.ರಮೇಶ್‌ಗೌಡ ಕಾಳೇನಹಳ್ಳಿ, ಮುಖಂಡ ಗುರುಸ್ವಾಮಿ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ