ವಿಧಾನಪರಿಷತ್ನ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಮಾಜಿ ಶಾಸಕ ಕೆಟಿ ಶ್ರೀಕಂಠೇಗೌಡ ಆಯ್ಕೆಯಾಗಿದ್ದಾರೆ.
ಅವರು ಮೂರು ಬಾರಿ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.ಅವರ ಪರಿಷತ್ ಸದಸ್ಯ ಅವಧಿ ಇತ್ತೀಚೆಗೆ ಅಂತ್ಯಗೊಂಡಿತ್ತು. ಉತ್ತಮ ಸಂಸದೀಯಪಟುವಾಗಿದ್ದ ಅವರು, ದಕ್ಷಿಣ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿದ್ದರು. ಜಾತ್ಯಾತೀತ ಜನಾತದಳ ಪಕ್ಷದ ಹಿರಿಯ ನಾಯಕರಾಗಿದ್ದರು.
ಪರಿಷತ್ನಲ್ಲಿ ಪ್ರತಿಪಕ್ಷದ ಉಪನಾಯಕ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಅವರ ನಡವಳಿಕೆ, ಸಾಧನೆ, ಭಾಗವಹಿಸುವಿಕೆ, ಜನಪರ ಕಾಳಜಿಯನ್ನು ಪರಿಗಣಿಸಿ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಾಳೆ ಮಂಗಳವಾರ ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಶ್ರೀಕಂಠೇಗೌಡರಿಗೆ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.