Thursday, September 19, 2024

ಪ್ರಾಯೋಗಿಕ ಆವೃತ್ತಿ

“ಮಹಾನಾಯಕ ಅಂಬೇಡ್ಕರ್” ಧಾರಾವಾಹಿ ಕುರಿತ ರಸಪ್ರಶ್ನೆ ಸ್ಪರ್ಧೆ

ನಿಸರ್ಗ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಮದ್ದೂರು ಪಟ್ಟಣದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜುಲೈ 30 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನೊಳಗೊಂಡ “ಮಹಾನಾಯಕ” ಧಾರಾವಾಹಿಗೆ ಸಂಬಂಧಿಸಿದಂತೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಂಸ್ಥೆಯ  ಅಧ್ಯಕ್ಷ ಹುಲಿಗೆರೆಪುರ ಮಹದೇವು ತಿಳಿಸಿದರು.

nudikarnataka.com

ಜಾಹೀರಾತು

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 12 ಗಂಟೆಗೆ ಸ್ಪರ್ಧೆ ಆರಂಭಗೊಳ್ಳಲಿದೆ. ಧಾರಾವಾಹಿ ಆರಂಭದ ದಿನದಿಂದ 2023ರ ಜೂನ್ 25 ರವರೆಗೆ ಪ್ರಸಾರವಾಗಿರುವ ಸಂಚಿಕೆಗಳಿಗೆ ಸಂಬಂಧಿಸಿದಂತೆ ರಸಪ್ರಶ್ನೆ ನಡೆಸಲಾಗುವುದು ಎಂದರು.

ವಿಜೇತರಿಗೆ 10000 ರೂ (ಪ್ರ)., 5000 ರೂ.(ದ್ವಿ), 3,000 ರೂ.(ತೃ) ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ಮೊದಲ ನೋಂದಣಿ ಮಾಡಿಸಿಕೊಂಡ ನೂರು ಜನರಿಗೆ ಮಾತ್ರ ಪ್ರವೇಶ. ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ವಯಸ್ಸಿನ ಮಿತಿ ಇಲ್ಲ. ಪುರುಷರು ಮತ್ತು ಮಹಿಳೆಯರು ಕೂಡ ಭಾಗವಹಿಸಬಹುದು ಎಂದರು.

ಸ್ಪರ್ಧೆ ಬಳಿಕ ಮಧ್ಯಾಹ್ನ 1.30 ಗಂಟೆಗೆ ನಡೆಯಲಿರುವ ವೇದಿಕೆ ಸಮಾರಂಭವನ್ನು ಶಾಸಕ ಕೆ.ಎಂ.ಉದಯ್ ಚಾಲನೆ ನೀಡುವರು. ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಅಂಬೇಡ್ಕರ್ ಸೇವಾ ಸಮಿತಿಯ ಕೋಲಾರ ಸಂದೇಶ್, ಆರ್.ಕೆ.ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ, ಅಂತರಾಷ್ಟ್ರೀಯ ಜನಪದ ಗಾಯಕ ಅಮ್ಮ ರಾಮಚಂದ್ರ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ವಿವರಿಸಿದರು. ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊ. 9482628404 ಹಾಗೂ 9916801070 ಸಂಪರ್ಕಿಸಬಹುದು ಎಂದರು.

ಗೋಷ್ಠಿಯಲ್ಲಿ ರಸಪ್ರಶ್ನೆ ಸ್ಪರ್ಧೆ ನಿರ್ವಹಣಾ ಸಮಿತಿ ಸದಸ್ಯರಾದ ಕಾಳಯ್ಯ, ದೊರೆಸ್ವಾಮಿ, ಡಿ.ಕೆ.ಕೃಷ್ಣ ಯೋಗೇಶ್, ಮೂರ್ತಿ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!