Friday, November 20, 2026

ಪ್ರಾಯೋಗಿಕ ಆವೃತ್ತಿ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

ಮಂಡ್ಯ ಜಿಲ್ಲೆಯಾದ್ಯಂತ ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಕಾರ್ಯ ಪ್ರಾರಂಭವಾಗಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮಂಡ್ಯ ತಾಲ್ಲೂಕಿನ ಬಿ. ಹೊಸೂರು ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರವಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸಿದರು.

ಅಲ್ಲದೇ ನಾಗಮಂಗಲ ತಾಲೂಕು ಬೇಟಿ ನೀಡಿ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ 2024 ಸಂಬಂಧಪಟ್ಟ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ಪುರಸಭಾ ವಾಣಿಜ್ಯ ಸಂಕೀರ್ಣದ ನೂತನ ಕಟ್ಟಡದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ , ಪುರಸಭೆಗೆ ಭೇಟಿ ನೀಡಿ ಕುಡಿಯುವ ನೀರು, ಸ್ವಚ್ಛತೆ, ಕಸ ವಿಲೇವಾರಿ ಇತ್ಯಾದಿಗಳ ಬಗ್ಗೆ ಮುಖ್ಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ‌ಡಾ.ಹೆಚ್.ಎಲ್ ನಾಗರಾಜ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ