Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ಪಕ್ಷದ ಕಾರ್ಯಕರ್ತರು. ರಾಜ್ಯ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷ ಜನ ವಿರೋಧಿ ಆಡಳಿತ ನಡೆಸುತ್ತಿದೆ, ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳನ್ನು ಹಾಕುವ ಮೂಲಕ ಸವಲತ್ತಿನಿಂದ ಜನರನ್ನು ವಂಚಿಸುತ್ತಿದೆ, ಚುನಾವಣೆ ಪ್ರಣಾಳಿಕೆಯಲ್ಲಿ ಎಲ್ಲಾ ಜನರಿಗೂ ಗ್ಯಾರಂಟಿ ಸವಲತ್ತು ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಸಮರ್ಪಕವಾಗಿ ಯೋಜನೆಯನ್ನು ಜಾರಿ ಮಾಡುವಲ್ಲಿ ವಿಫವಾಗಿದೆ ಎಂದು ದೂರಿದರು.

ವಿಧಾನಸಭೆಯಲ್ಲಿ ಸಭಾಧ್ಯಕ್ಷರು ಪ್ರತಿಪಕ್ಷದ 10 ಶಾಸಕರನ್ನು ಅಮಾನತು ಮಾಡಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ, ಕಲಾಪವನ್ನು ಸುಗಮವಾಗಿ ಮುನ್ನಡೆಸಬೇಕಾದ ಸಭಾಧ್ಯಕ್ಷರು ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದಾರೆ, ಪ್ರತಿಪಕ್ಷ ಶಾಸಕರ ಹಕ್ಕನ್ನ ಹತ್ತಿಕ್ಕಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್, ಮುಖಂಡರಾದ ಸಿದ್ದರಾಮಯ್ಯ, ಅಶೋಕ್ ಜಯರಾಂ,  ಇಂಡವಾಳು ಸಚ್ಚಿದಾನಂದ, ವಿವೇಕ್, ಸಿ.ಟಿ ಮಂಜುನಾಥ್, ಅರವಿಂದ್ ನೇತೃತ್ವ ವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ