Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮೀನುಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯಿಂದ 2023-24ನೇ ಸಾಲಿನ ಜಿಲ್ಲಾ ವಲಯ (ಜಿಲ್ಲಾ ಪಂಚಾಯತ್) ಯೋಜನೆಗಳಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮೀನುಗಾರರು ಅಗತ್ಯ ದಾಖಲಾತಿಗಳೊಡನೆ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.

ಯೋಜನೆಗಳ ವಿವರ: ಒಳನಾಡು ಮೀನುಗಾರಿಕೆ ಅಭಿವೃದ್ದಿಗೆ ಸಹಾಯ ಯೋಜನೆಯಡಿ ಮೀನು ಕೃಷಿಕರು 0.10 ಹೆಕ್ಟೇರ್ ವಿಸ್ತೀರ್ಣದಲ್ಲಿ ಮೀನು ಕೃಷಿ ಕೊಳ ನಿರ್ಮಾಣ ಮಾಡಲು ಪ್ರತಿ ಫಲಾನುಭವಿಗೆ 32.000ರೂ ಸಹಾಯಧನ ನೀಡಲಾಗುವುದು. ಬಾವಿ ಮತ್ತು ಹೊಂಡಗಳಲ್ಲಿ ಮೀನು ಕೃಷಿ ಕೈಗೊಳ್ಳಲು ರೈತರಿಗೆ ತಲಾ 500 ಮೀನು ಮರಿಗಳನ್ನು ಸರಬರಾಜು ಮಾಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀನುಗಾರರಿಗೆ 10.000ರೂ ವೆಚ್ಚದಲ್ಲಿ ಉಚಿತ ಮೀನುಗಾರಿಕೆ ಸಲಕರಣೆ ಕಿಟ್ಟುಗಳನ್ನು ವಿತರಿಸಲಾಗುವುದು.

ಜಾಹೀರಾತು

ಮೀನು ಮಾರುಕಟ್ಟೆಗಳ ನಿರ್ಮಾಣ  ಮತ್ತು ಮೀನು ಮಾರುಕಟ್ಟೆಗೆ ಸಹಾಯ ಯೋಜನೆಯಡಿ ಐಸ್ ಬಾಕ್ಸ್ ನೊಂದಿಗೆ ದ್ವಿಚಕ್ರ ವಾಹನ ಖರೀದಿಸಲು ಗರಿಷ್ಟ 30.000ರೂ ಸಹಾಯಧನ ನೀಡಲಾಗುವುದು ಎಂದು ಜಿಲ್ಲಾ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕುಗಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!