ರಾಷ್ಟ್ರ ವಿಕಾಸ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಡ್ಯ ಜಿಲ್ಲಾ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕಾರ್ಗಿಲ್ ವಿಜಯೋತ್ಸವ ನೆನಪಿಗಾಗಿ ಬೃಹತ್ ರಕ್ತದಾನ ಹಾಗೂ ನೇತ್ರದಾನ ಶಿಬಿರವನ್ನು ಜು.30ರಂದು ಮಂಡ್ಯನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗುವುದು ಎಂದು ನಿವೃತ್ತ ಯೋಧ ಸಿಪಾಯಿ ಶ್ರೀನಿವಾಸ್ ಹೇಳಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್.ಯತೀಶ್ ಸಮಾರಂಭ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಲ್ಲರಾಜು ಭಾಗವಹಿಸುವರು ಎಂದರು.
ಸಂಜೆ 5ಗಂಟೆಗೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮೇಜರ್ ಅಶ್ವಥ್ ಕುಮಾರ್ ವಹಿಸುವರು. ಜಿಲ್ಲಾಧಿಕಾರಿ ಡಾ.ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪತ್ರಕರ್ತ ಅಜಿತ್ ಹನುಮಕ್ಕನವರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದರು.
ಗೋಷ್ಠಿಯಲ್ಲಿ ಶಶಿಕುಮಾರ್, ನವೀನ್ ಹಾಗೂ ಯೋಗೇಶ್ ಉಪಸ್ಥಿತರಿದ್ದರು.