Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ ತುಪ್ಪ ಸ್ಥಗಿತ- ಸಿಎಂ ಸಿದ್ದರಾಮಯ್ಯ

ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ  ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

“>

ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ. ತಿರುಪತಿಯೊಂದಿಗಿನ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ ಸಿದ್ದರಾಮಯ್ಯ ಅವರ ತಾತ್ಸಾರ ನೀತಿ ರುಜುವಾತಾಗಿದೆ ಎಂದು ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್ ಟ್ವೀಟ್ ಗೆ ತಿರುಗೇಟು ನೀಡಿದ್ದಾರೆ.

ಜಾಹೀರಾತು
ಸಂಸದ ನಳೀನ್ ಕುಮಾರ್ ಕಟೀಲ್ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಬೊಮ್ಮಾಯಿ 

ಅವರು ಮಾತ್ರ ಹಿಂದೂ ವಿರೋಧಿಯೋ? ಎಂದು ಪ್ರಶ್ನಿಸಿದ್ದಾರೆ.

ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ ಸ್ಪಷ್ಟಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!