ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕೆಂದು ಮನ್ ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಕಿವಿಮಾತು ಹೇಳಿದರು.
ಮಂಡ್ಯ ತಾಲೂಕಿನ ಮುದಗಂದೂರು ಗ್ರಾಮದ ಶ್ರೀಬನಶಂಕರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ತಮ್ಮ ಶ್ರೀಶಂಭು ಸೇವಾ ಟ್ರಸ್ಟ್ ನ ವತಿಯಿಂದ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ವಿತರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಶ್ರದ್ಧೆ, ಆಸಕ್ತಿಯಿಂದ ಗುರುಗಳು ಹೇಳಿ ಕೊಡುವ ಪಾಠ ಕಲಿಯಬೇಕು. ಗಮನವಿಟ್ಟು ವಿದ್ಯಾಭ್ಯಾಸ ಮಾಡಿದರೆ ಉತ್ತಮ ಅಂಕ ಗಳಿಸಲು ಸಹಾಯಕವಾಗುತ್ತದೆ.ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಅಂಕ ಗಳಿಸಿ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿದರು.
ನಾನು ನನ್ನ ಕೈಲಾದ ಮಟ್ಟಿಗೆ ಶಾಲಾ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ಚಾಚಿದ್ದೇನೆ.ಪ್ರತಿಭಾವಂತ ವಿದ್ಯಾರ್ಥಿಗಳ ನೆರವಿಗೆ ಸದಾ ಶ್ರೀ ಶಂಭು ಸೇವಾ ಟ್ರಸ್ಟ್ ಮೂಲಕ ಕಾರ್ಯ ಪ್ರವೃತ್ತನಾಗುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ಹೊಂಬಯ್ಯ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್, ಸದಸ್ಯರಾದ ಶಂಕರೇಗೌಡ,ಚನ್ನಮರೀಗೌಡ,ರವಿ, ಬಿಳಿದೇಗಲು ಪ್ರತಾಪ್,ಯತ್ತಗದಹಳ್ಳಿ ಅವಿನಾಶ್ ಹಾಗೂ ಶಾಲಾ ಶಿಕ್ಷಕರು ಮತ್ತು ಸಂಸ್ಥೆಯ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.