ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಅರಗ ಜ್ಞಾನೇಂದ್ರರನ್ನು ಕೂಡಲೇ ಉಚ್ಚಾಟನೆ ಮಾಡಬೇಕೆಂದು ಆಗ್ರಹಿಸಿದೆ.
ಅರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ. ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ. ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಶ್ರೀ ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ @JnanendraAraga ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ.
ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ.ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ…
— Karnataka Congress (@INCKarnataka) August 2, 2023
“>
ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮಾತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತಾರೆ. ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.




