Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ನೂತನ ತಹಶೀಲ್ದಾರ್ ಆಗಿ ಶಿವಕುಮಾರ್ ಬಿರಾದಾರ್ ನೇಮಕ

ಮಂಡ್ಯ ತಾಲ್ಲೂಕು ನೂತನ ತಹಶೀಲ್ದಾರ್ ಆಗಿ ಶಿವಕುಮಾರ್ ಬಿರಾದಾರ್ ಅವರನ್ನು ಸರ್ಕಾರ ನೇಮಕ ಮಾಡಿದೆ.

ಈ ಹಿಂದೆ ಅವರು ಕೂಡಲಸಂಗಮ ಅಭಿವೃದ್ದಿ ಪ್ರಾಧಿಕಾರದಲ್ಲಿ ಹಾಗೂ ಹರಪನಹಳ್ಳಿ ಹಾಗೂ ವಿಜಯನಗರದಲ್ಲಿ ಕೆಲಸ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಜಾಹೀರಾತು

ನುಡಿಕರ್ನಾಟಕ.ಕಾಂನೊಂದಿಗೆ ಮಾತನಾಡಿದ ಅವರು, ಮಂಡ್ಯ ತಾಲ್ಲೂಕು ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುವುದು ಸವಾಲಿನಿಂದ ಕೂಡಿದೆ, ಇಲ್ಲಿನ ಸಮಸ್ಯೆಗಳನ್ನು ತಿಳಿದುಕೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ, ನಂತರ ಜನಸಾಮಾನ್ಯರ ಕೆಲಸಗಳಲ್ಲಿ ವಿಳಂಬವಿಲ್ಲದೇ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇಲ್ಲಿನ ಎಲ್ಲಾ ಅಧಿಕಾರಿಗಳು ಹಾಗೂ ನೌಕರರ ವಿಶ್ವಾಸದೊಂದಿಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತೇನೆ ಎಂದ ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ