Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಮುಕ್ತ ವಿ.ವಿ ಪ್ರವೇಶಾತಿ ಪ್ರಚಾರಾಂದೋಲನಕ್ಕೆ ಚಾಲನೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿ ಪ್ರಚಾರ ಆಂದೋಲನಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಚಾಲನೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಶೈಕ್ಷಣಿಕ ವಂಚಿತರು, ಸಮಾಜದ ಕೆಳಸ್ಧರದಲ್ಲಿರುವವರು, ಶೋಷಿತರು, ವೃದರು, ಮಹಿಳೆಯರು ಮತ್ತು ಅಂಗವಿಕಲರಿಗೆ, ಶಿಕ್ಷಣ ನೀಡುವ ಮುಖಾಂತರ ಶೈಕ್ಷಣಿಕ ಕಾಮಧೇನು ಎನಿಸಿಕೊಂಡಿದೆ. ಸಾಂಪ್ರದಾಯಿಕ ವಿ.ವಿಗಳಿಗೆ ಸರಿಸಮಾನವಾಗಿ ತಾಂತ್ರಿಕತೆಯ ಜೊತೆಯಲ್ಲಿ ಪ್ರವೇಶಾತಿ ನೀಡುತ್ತಿರುವ ವಿ.ವಿಯು, ಅತಂತ್ಯ ಕಡಿಮೆ ದರದಲ್ಲಿ ನೀಡುತ್ತಿರುವ ಶೈಕ್ಷಣಿಕ ಸವಲತ್ತನ್ನು ಜಿಲ್ಲೆಯ ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಪ್ರಾದೇಶಿಕ ಕೇಂದ್ರದ ನಿರ್ದೇಶಕಿ ಮಿಲನ ಮಾತನಾಡಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ದೇಶದ ದೂರ ಶಿಕ್ಷಣ ವ್ಯವಸ್ಥೆಯಲ್ಲಿ ಅಗ್ರಪಂಕ್ತಿಯಲ್ಲಿದ್ದು, ಶೈಕ್ಷಣಿಕ ಸ್ವರ್ಧೆಯಲ್ಲಿ ತಾಂತ್ರಿಕ ಸವಲತ್ತುಗಳನ್ನು ನೀಡುವ ಮೂಲಕ ಸಾಂಪ್ರದಾಯಿಕ ಶಿಕ್ಷಣಕ್ಕೆ ಸೆಡ್ಡು ಹೊಡೆದು ನಿಂತಿದೆ. ಜಿಲ್ಲೆಯ ಶೈಕ್ಷಣಿಕ ಅಭಿವೃದ್ದಿಯ ಮಾಪನಕ್ಕೆ ಕೆ.ಎಸ್.ಒ.ಯು ಕೊಡುಗೆಯನ್ನು ಜಿಲ್ಲೆಯ ಪ್ರತಿಯೊಂದು ಕುಟುಂಬವು ಸಕಾರಾತ್ಮಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಾಹೀರಾತು

ಇದರ ಜೊತೆಯಲ್ಲಿ ಪ್ರಾದೇಶಿಕ ಕೇಂದ್ರವು ಸೇರಿದಂತೆ, ನಗರದ ಹಲವು ಪ್ರಮುಖ ಸ್ಥಳಗಳಲ್ಲಿ ವಾಹನದ ಮೂಲಕ ಎಲ್.ಇ.ಡಿ ಪರದೆಯಲ್ಲಿ ಶೈಕ್ಷಣಿಕ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತ್ತು. ಈ ಸಂದರ್ಭದಲ್ಲಿ ಪ್ರಚಾರ ಆಂದೋಲನ ಸಂಯೋಜಕ ಸಿದ್ದೇಗೌಡ, ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು, ಪ್ರವಾಸ ಕಾರ್ಯಕ್ರಮದ ನಿಯೋಜಿತ ಸಿಬ್ಬಂದಿಗಳು, ರೋಟರಿ ಕ್ಲಬ್‍ ಅಧ್ಯಕ್ಷ ಅನುಪಮಾ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ