Sunday, November 22, 2026

ಪ್ರಾಯೋಗಿಕ ಆವೃತ್ತಿ

ಕೇಂದ್ರಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಆಹೋರಾತ್ರಿ ಸ್ವಾತಂತ್ರ್ಯ ದಿನೋತ್ಸವ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ರೈತ ವಿರೋಧಿ ನೀತಿಗಳನ್ನು ವಿರೋಧಿಸಿ 9 ಆಗಸ್ಟ್ ಮಂಡ್ಯ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಹಾಗೂ ಆ.14ರಂದು ಸಂಜೆ 6 ರಿಂದ ಆ.15ರ ಬೆಳಗಿನವರೆಗೆ ಆಹೋರಾತ್ರಿ ಸ್ವಾತಂತ್ರ್ಯ ದಿನೋತ್ಸವ ಕಾರ್ಯಕ್ರಮವನ್ನು ಮದ್ದೂರಿನ ಶಿವಪುರ ಸತ್ಯಾಗ್ರಹ ಸೌಧದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ದುಡಿತದ ಅವಧಿಯನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶ ಹಿಂಪಡೆಯಬೇಕು, ಜೀವನ ಯೋಗ್ಯ ಕನಿಷ್ಟ ವೇತನ ರೂ.31,500ಕ್ಕೆ ಹೆಚ್ಚಿಸಿ, ಕಾರ್ಮಿಕ ವಿರೋಧಿ ಲೇಬರ್ ಕೋಡ್ ರದ್ದು ಮಾಡಬೇಕು. ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿ ಕನಿಷ್ಟ ರೂ.8000 ಪಿಂಚಣಿ ನೀಡಬೇಕು, ಸಾರ್ವಜನಿಕ ಉದ್ದಿಮೆಗಳ ಖಾಸಗಿಕರಣ ಮತ್ತು ನಗದೀಕರಣ ನಿಲ್ಲಿಸಬೇಕೆಂದು ಒತ್ತಾಯಿಸಲಾಗುವುದು ಎಂದರು.

nudikarnataka.com

ಉದ್ಯೋಗ ಖಾತ್ರಿ ಯೋಜನೆ ಮನರೇಗಾ ದುಡಿತದ ದಿನಗಳನ್ನು 200ಕ್ಕೆ ಹೆಚ್ಚಿಸಿ. ದಿನಕ್ಕೆ 600 ರೂ ಕೂಲಿ ನೀಡಬೇಕು. ಸ್ಕೀಂ ಕಾರ್ಮಿಕರಾದ ಆಶಾ, ಅಂಗನವಾಡಿ ಮತ್ತು ಬಿಸಿಯೂಟ ಕಾರ್ಮಿಕರನ್ನು ಕನಿಷ್ಟ ವೇತನವ್ಯಾಪ್ತಿಗೆ ಒಳಪಡಿಸಿ, ವಲಸೆ ಕಾರ್ಮಿಕರಿಗೆ ಸೇವಾ ಭದ್ರತೆ ಮತ್ತು ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿ ಮಾಡಬೇಕು. ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿ, ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ಖಾತ್ರಿಗೊಳಿಸಿ ಮತ್ತು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು, ವಿದ್ಯುತ್ ಶಕ್ತಿ ಮಸೂದೆ 2020ನ್ನು ಹಿಂಪಡೆಯಬೇಕೆಂದು ನಮ್ಮ ಆಗ್ರಹವಾಗಿದೆ ಎಂದರು.

ಜಾಹೀರಾತು

ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷೆ ಖಾತ್ರಿಗೊಳಿಸುವುದು, 8.5% ಸಕ್ಕರೆ ಇಳುವರಿ ಆಧಾರದಲ್ಲಿ ಟನ್ ಕಬ್ಬಿಗೆ ರೂ.5000 ಬೆಲೆ ನಿಗದಿಪಡಿಸಬೇಕು ಮತ್ತು ಡಾ.ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು. ಪಡಿತರದಲ್ಲಿ ನಗದು ಬದಲಿಗೆ ಆಹಾರ ಧಾನ್ಯಗಳನ್ನು ನೀಡಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ಮಶಾನಕ್ಕೆ ಜಾಗ ಮೀಸಲಿಡಬೇಕು, ಮೂಲ ಸೌಕರ್ಯ ನೀಡಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ಕಾಡು ಪ್ರಾಣಿಗಳಿಂದ ಧಾಳಿಗೊಳಗಾಗಿ ಬೆಳೆ ನಷ್ಟ ಹೊಂದಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ಲೀಟರ್ ಹಾಲಿಗೆ 50 ರೂ. ಬೆಲೆ ನಿಗದಿಪಡಿಸಬೇಕು. ಮನೆ ನಿವೇಶನ ಇಲ್ಲದವರಿಗೆ ಮನೆ ನಿವೇಶನ ನೀಡಬೇಕು ಹಾಗೂ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರ ನೀಡಬೇಕು ಹಾಗೂ ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಿಸಬೇಕೆಂದು ಆಗ್ರಹಿಸಿದರು.

ಗೋ‍ಷ್ಠಿಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಕರ್ನಾಟಕ ಪ್ರಾಂತ ರೈತಸಂಘದ ಮಳವಳ್ಳಿ ತಾಲ್ಲೂಕು ಅಧ್ಯಕ್ಷ ಎನ್.ಎಲ್.ಭರತ್ ರಾಜು, ಮುಖಂಡರಾದ ಬಿ.ಎಂ.ಶಿವಮಲ್ಲು, ಅರುಣ್ ಕುಮಾರ್, ಚಂದ್ರಶೇಖರ್, ಮಂಜುಳ ಹಾಗೂ ರಾಮಯ್ಯ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ