Friday, November 20, 2026

ಪ್ರಾಯೋಗಿಕ ಆವೃತ್ತಿ

ಬೆಂಗಳೂರು| ಪ್ರಾಂಶುಪಾಲನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ರಾಜ್ಯ ರಾಜಧಾನಿಯೇ ಬೆಚ್ಚಿ ಬೀಳಿಸುವ ಹೇಯ ಕೃತ್ಯವೊಂದು ವರದಿಯಾಗಿದೆ. ಹತ್ತು ವರ್ಷದ ವಿದ್ಯಾರ್ಥಿನಿಯನ್ನು ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರಗೈದಿರುವ ಆರೋಪ ಕೇಳಿಬಂದಿದೆ.

ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಶಾಲಾ‌ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ ವ್ಯಕ್ತಿಯೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಘಟನೆಯ ಬಗ್ಗೆ ವರ್ತೂರು ಪೊಲೀಸರು ಮಾಹಿತಿ ನೀಡಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮುಂದಿನ ಪ್ರಕ್ರಿಯೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ನಿನ್ನೆ(ಆ.03) ಎಂದಿನಂತೆ 10 ವರ್ಷದ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು. ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಕಂಡ ಪ್ರಾಂಶುಪಾಲ ವಿದ್ಯಾರ್ಥಿನಿಯನ್ನು ಖಾಲಿಯಾಗಿದ್ದ ಕೊಠಡಿಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಮನೆಗೆ ಬಂದ ಬಳಿಕ ವಿದ್ಯಾರ್ಥಿನಿ ನೋವು ತಾಳದೆ ಒದ್ದಾಡುತ್ತಿರುವುದನ್ನು ಗಮನಿಸಿ, ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದ್ದು, ಈ ವಿಚಾರವಾಗಿ ಕೇಳಿದಾಗ ಬಾಲಕಿ ನಡೆದ ಘಟನೆ ವಿವರಿಸಿದ್ದಾಳೆ. ಮೊದಲು ಪ್ರಾಂಶುಪಾಲರ ಕೊಠಡಿಗೆ ಕರೆದುಕೊಂಡು ಹೋದರು. ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದರು. ನಂತರ ಕೇಕ್ ತಿನ್ನಿಸಿ ಕಳುಹಿಸಿದರು ಎಂದು ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಪ್ರಾಂಶುಪಾಲನ ಕೃತ್ಯವನ್ನು ವಿವರಿಸಿದ್ದಾಳೆ.

ಸದ್ಯ ಮಗುವಿಗೆ ರಕ್ತಸ್ರಾವ ಹೆಚ್ಚಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.

ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿ ನರದೌರ್ಬಲ್ಯ(Mild Dyslexia oct) ಎಂಬ ಕಾಯಿಲೆಯಿಂದ ಬಳಲುತ್ತಿದ್ದಳು. ವರ್ತೂರಿನ ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎಂದು ವರದಿಯಾಗಿದೆ.

ಕೃಪೆ: ಈದಿನ.ಕಾಂ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ