ಸಚಿವ ಚಲುರಾಯಸ್ವಾಮಿ ಅವರು ಕೃಷಿ ಇಲಾಖೆಯ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ದೂರು ರಾಜ್ಯಪಾಲರ ಅಂಗಳ ತಲುಪಿರುವ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾನು ಲಂಚಕ್ಕೆ ಬೇಡಿಕೆ ಇಟ್ಟಿದ್ದೇ ಆದರೆ ಮುಖ್ಯಮಂತ್ರಿಗಳು ಯಾವುದೇ ತನಿಖೆ ನಡೆಸಿ, ಸತ್ಯಾಂಶ ತಿಳಿದು ಕೊಳ್ಳಲಿ ಎಂದು ಮಂಡ್ಯದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸಹಾಯಕ ಕೃಷಿ ನಿರ್ದೇಶಕರಿಂದ ರಾಜಭವನಕ್ಕೆ ದೂರು ವಿಚಾರ ಮಂಡ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದೆ.
| #mandya | #nagamangala | #karnatakastategovernment | #Cheluvarayaswamy | #agriculture | #Minister | pic.twitter.com/9AHI3DxKuO
— N Chaluvarayaswamy (@Chaluvarayaswam) August 7, 2023
“>
ಮಂಡ್ಯ ಜಿಲ್ಲೆಯ ಅಧಿಕಾರಿಗಳು ನೀಡಿರುವ ದೂರು ಎಂದು ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ. ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು,ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ ಎಂದು ಸಂಶಯ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದು, ಇದು ಹತಾಶೆ ಮನೋಭಾವವಾಗಿದೆ. ನಕಲಿ ದೂರು ಪತ್ರ ಸೃಷ್ಟಿಸಿ ಉದ್ದೇಶ ಪೂರ್ವಕವಾಗಿ ಕೆಟ್ಟ ಹೆಸರು ತರಲು ಇಂತಹ ಪ್ರಯತ್ನ ಮಾಡಲಾಗುತ್ತಿದೆ ಎಂದರು.




