Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ಕಾರ‍್ಯಕರ್ತರು ಮಂಡ್ಯ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮಂಡ್ಯನಗರದ ಸರ್ ಎಂ.ವಿ. ಪ್ರತಿಮೆ ಬಳಿ ಜಮಾಯಿಸಿದ ಕಾರ‍್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರೈತರು ತಾವು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ‍್ಯವನ್ನು ಎಪಿಎಂಸಿ ಕಾಯಿದೆ ಮುಖಾಂತರ ಕೊಟ್ಟಿತ್ತು. ಈ ಮುಖಾಂತರ ರೈತರಿಗೆ ಸಾಕಾಣಿಕೆ ವೆಚ್ಚ, ದಲ್ಲಾಳಿಗಳ ಕಮಿಷನ್ ಮತ್ತು ಇತರೆ ಖರ್ಚುಗಳು ಉಳಿತಾಯವಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಎಪಿಎಂಸಿ ಕಾನೂನನ್ನು ರದ್ದು ಮಾಡಿ ರೈತರ ಆದಾಯಕ್ಕೆ ಕುತ್ತು ತಂದಿದೆ ಎಂದು ಆರೋಪಿಸಿದರು.

ಅವೈಜ್ಞಾನಿಕ ವಿದ್ಯುತ್ ದರ ಹೆಚ್ಚಳ ಮಾಡಿರುವುದರಿಂದ ರೈತರು ಅವಲಂಬಿತವಾಗಿರುವ ಹತ್ತಿ ಉದ್ಯಮ, ರೈಸ್‌ಮಿಲ್ ಮತ್ತು ಆಲೆಮನೆಗಳು ಸೇರಿದಂತೆ ಇತರೆ ರೈತರು ಬಳಕೆ ಮಾಡುತ್ತಿದ್ದು, ಸಣ್ಣ ಮತ್ತು ಅತಿ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಬಾರಿ ತೊಂದರೆ ಆಗಿದೆ ಎಂದು ದೂರಿದರು.

ನೀರಾವರಿ ಯೋಜನೆಗಳಿಗೆ 23 ಸಾವಿರ ಕೋಟಿ ಅನುದಾನ ಒದಗಿಸಿದ್ದು, ಅದನ್ನು ಈಗ 19 ಸಾವಿರ ಕೋಟಿಗೆ ಇಳಿಸಿ ರೈತರಿಗೆ ಅನ್ಯಾಯವೆಸಗಿದೆ. ಮೇಕೆದಾಟು ಯೋಜನೆಗೆ ಯಾವುದೇ ಬಜೆಟ್‌ನಲ್ಲಿ ಯಾವುದೇ ನುದಾನ ನೀಡದೆ ಕಾಂಗ್ರೆಸ್ ಮಾಡಿದ ಪಾದಯಾತ್ರೆ ಕೇವಲ ರಾಜಕೀಯ ಸ್ಟಂಟ್ ಆಗಿದೆ ಎಂದು ಕಿಡಿಕಾರಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜೋಗೀಗೌಡ, ಮುಖಂಡರಾದ ಡಾ.ಸಿದ್ದರಾಮಯ್ಯ, ಕೆ.ಎಸ್. ನಂಜುAಡೇಗೌಡ, ಸಿ.ಟಿ. ಮಂಜುನಾಥ್, ಜವರೇಗೌಡ, ಜಿ.ಸಿ. ಮಹೇಂದ್ರ, ಪೀಹಳ್ಳಿ ರಮೇಶ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!