Sunday, November 22, 2026

ಪ್ರಾಯೋಗಿಕ ಆವೃತ್ತಿ

ಲಂ‍ಚ ಆರೋಪದ ಹಿಂದಿರುವವರು ಬಿಜೆಪಿ ಫೇಕ್ ಫ್ಯಾಕ್ಟರಿಯೋ ? ಪೆನ್ ಡ್ರೈವ್ ಶೂರರೋ ? ಬಯಲಿಗಿಡುತ್ತೇವೆ – ಕಾಂಗ್ರೆಸ್

ನಕಲಿ ಪೆನ್ ಡ್ರೈವ್ ಆಯ್ತು, ಶಾಸಕ ಬಿ ಆರ್ ಪಾಟೀಲ್ ಹೆಸರಿನ ನಕಲಿ ಪತ್ರ ಆಯ್ತು, ಈಗ ಅಧಿಕಾರಿಗಳ ಹೆಸರಲ್ಲಿ ನಕಲಿ ದೂರು! ಸರ್ಕಾರವನ್ನು ಎದುರಿಸಲು ಅಸಲಿ ವಿಷಯಗಳಿಲ್ಲದೆ ವಿಪಕ್ಷಗಳು ನಕಲಿ ವಿಷಯ ಸೃಷ್ಟಿಸಿ ಹೆದರಿಸಲು ಮುಂದಾಗಿವೆ ಎಂದು ಕಾಂಗ್ರೆಸ್ ಪಕ್ಷವು ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ದ ಕಿಡಿಕಾರಿದೆ.

“>

ಪತ್ರದಲ್ಲಿ ಹೆಸರಿಸಿರುವ ಅಧಿಕಾರಿಗಳು ಯಾರೂ ಮಂಡ್ಯದಲ್ಲಿಲ್ಲ, ಈ ಪತ್ರದ ಕುರಿತು ಮಾಹಿತಿಯೂ ಮಂಡ್ಯದ ಅಧಿಕಾರಿಗಳಿಗಿಲ್ಲ ಎಂದು ಖಚಿತಪಡಿಸಿದ್ದಾರೆ, ಈ ನಕಲಿ ಪತ್ರಗಳ ಕುರಿತು ಸರ್ಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಿದೆ. ಇದರ ಹಿಂದಿರುವುದು ಬಿಜೆಪಿ ಫೇಕ್ ಫ್ಯಾಕ್ಟರಿಯೋ ಅಥವಾ ಪೆನ್ ಡ್ರೈವ್ ಶೂರರೋ ಎಂಬುದನ್ನು ಬಯಲಿಗಿಡುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.

ರಾಜ್ಯಪಾಲರ ಕಛೇರಿಯನ್ನೇ ಯಮಾರಿಸುವಷ್ಟು ಬಿಜೆಪಿಯ ನಕಲಿ ಪತ್ರಕೋರರು ನಿಷ್ಣಾತರಾಗಿದ್ದಾರೆ! ಈ ಹಿಂದೆ ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರ ಬರೆದ ಅಸಲಿ ಪತ್ರದ ಬಗ್ಗೆ ಚಕಾರ ಎತ್ತದ ಬಿಜೆಪಿ ಆತನ ಸಾವಿಗೆ ಕಾರಣವಾಗಿತ್ತು. ನಕಲಿ ಪತ್ರದ ಬಗ್ಗೆ ಪ್ರತಾಪ ತೋರಿಸುವ ಪೆನ್ ಡ್ರೈವ್ ಶೂರರು ಆಗ ಅಸಲಿ ಪತ್ರದ ಬಗ್ಗೆ ತುಟಿ ಬಿಚ್ಚಲಿಲ್ಲ ಏಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ